ಬೀದರ್ : ಪ್ರಸ್ತುತ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಡುವುದು ಅಗತ್ಯವಾಗಿದೆ ಎಂದು ಹಲಬರ್ಗಾದ ರಾಚೋಟೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ಅಭಿಪ್ರಾಯಪಟ್ಟರು.
ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದಲ್ಲಿ ನಡೆದ ಬಸವ ಚೇತನ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಬೌದ್ಧಿಕ ಬೆಳವಣಿಗೆ ಜತೆಗೆ ಅವರಿಗೆ ನೈತಿಕ ಹಾಗೂ ಮಾನವೀಯ ಮೌಲ್ಯಗಳನ್ನು ಕಲಿಸಬೇಕಿದೆ. ಆ ಮೂಲಕ ಸುಸಂಸ್ಕೃತ ಸಮಾಜ ನಿರ್ಮಿಸಬೇಕಿದೆ ಎಂದು ತಿಳಿಸಿದರು.
ಬಳಿಕ ಕರ್ನಾಟಕ ರಾಜ್ಯ ಅನುದಾನಿತ ಪದವಿಪೂರ್ವ ಕಾಲೇಜು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಡಾ.ವಿಜಯಕುಮಾರ ಪಾಟೀಲ ಮಾತನಾಡಿ, ಬಸವ ಚೇತನ ಪಬ್ಲಿಕ್ ಶಾಲೆ ಗ್ರಾಮೀಣ ಪ್ರದೇಶದಲ್ಲಿ ಸಂಸ್ಕಾರಯುತವಾದ ಸ್ಪರ್ಧಾತ್ಮಕ ಶಿಕ್ಷಣ ಕೊಡುತ್ತಿದೆ. ಉತ್ತಮ ನಾಗರಿಕರನ್ನು ನಿರ್ಮಿಸಲು ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ಎನ್.ಎಸ್.ಎಸ್.ಕೆ. ನಿರ್ದೇಶಕ ವೀರಶೆಟ್ಟಿ ಪಟ್ನೆ ಮಾತನಾಡಿದರು. ಶಾಲೆಯ ಅಧ್ಯಕ್ಷ ಗುಂಡಯ್ಯ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಚನ್ನಯ್ಯ ಸ್ವಾಮಿ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಪತ್ರಕರ್ತ ನಾಗೇಶ ಪ್ರಭಾ, ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪುರ, ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ, ಭುವನೇಶ್ವರ ಬಿರಾದಾರ, ಪಿಡಿಒ ಚಂದ್ರಕಾಂತ ಫುಲೆ, ನಿರಂತರ ಫೌಂಡೇಷನ್ ಸದಸ್ಯೆ ಡಾ.ಲಕ್ಷ್ಮಿ ಮುಗಳಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮಂಜುನಾಥ ಪಾಟೀಲ, ಪ್ರಾಚಾರ್ಯೆ ಚೈತನ್ಯ, ಶಾಲೆಯ ಆಡಳಿತಾಧಿಕಾರಿ ಪವನ್ ಪನಶೆಟ್ಟಿ ಮತ್ತಿತರರು ಇದ್ದರು.



