Tuesday, July 29, 2025
Google search engine

Homeಅಪರಾಧಕಾನೂನುಚಿನ್ನಸ್ವಾಮಿ ಕಾಲ್ತುಳಿತ ದುರಂತ – 52 ದಿನಗಳ ನಂತರ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್

ಚಿನ್ನಸ್ವಾಮಿ ಕಾಲ್ತುಳಿತ ದುರಂತ – 52 ದಿನಗಳ ನಂತರ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಅಮಾನತುಗೆ ಒಳಗಾಗಿದ್ದ ಪೊಲೀಸ್ ಅಧಿಕಾರಿಗಳಾದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಡಿಸಿಪಿ ಶೇಖರ್, ಎಸಿಪಿ ಎಚ್.ಟಿ. ಬಾಲಕೃಷ್ಣ ಮತ್ತು ಇನ್ಸ್ಪೆಕ್ಟರ್ ಗಿರೀಶ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ 52 ದಿನಗಳ ನಂತರ ವಾಪಸ್ ಪಡೆದುಕೊಂಡಿದೆ.

ಈ ಬಗ್ಗೆ ಜಾರಿ ಆದ ಮ್ಯಾಜಿಸ್ಟ್ರೇಟ್ ತನಿಖೆ ವರದಿಯ ಮೇರೆಗೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ಇದೀಗ ಈ ನಾಲ್ವರ ವಿರುದ್ಧ ಇಲಾಖಾ ತನಿಖೆಗೆ ಸೂಚನೆ ನೀಡಲಾಗಿದೆ. ಆದರೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತು ಕಾಯ್ದಿರಿಸಲಾಗಿದೆ.

ವಿಕಾಸ್ ಕುಮಾರ್ ಅವರ ಅಮಾನತು ವಿರುದ್ಧ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನೀಡಿದ ತಾತ್ಕಾಲಿಕ ತೀರ್ಪಿನನ್ವಯ ಅವರನ್ನು ಪುನರ್ ನೇಮಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿತ್ತು. ಆದರೆ ಸರ್ಕಾರ ಈ ತೀರ್ಪು ವಿರುದ್ಧ ಹೈಕೋರ್ಟ್‌ನಲ್ಲಿ ಅಪೀಲಿಸಿದೆ.

ಸಿಎಟಿ ಆದೇಶದ ಅನುಸಾರ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಆಗಸ್ಟ್ 1ರೊಳಗೆ ನಿರ್ಧಾರ ತಿಳಿಸಲು ಸೂಚನೆ ನೀಡಿದ್ದು, ಇಲ್ಲವಾದರೆ ಪ್ರತ್ಯೇಕ ಆದೇಶ ನೀಡುವುದಾಗಿ ಎಚ್ಚರಿಕೆ ನೀಡಿತ್ತು.

ಈ ಎಲ್ಲ ಬೆಳವಣಿಗೆಗಳ ನಡುವೆಯೂ, ಚಿನ್ನಸ್ವಾಮಿ ದುರಂತದ ಹೊಣೆಗಾರಿಕೆ ಕುರಿತಂತೆ ಅಧಿಕಾರಿಗಳ ಮೇಲೆ ಸರಿಯಾದ ಕ್ರಮ ಕೈಗೊಳ್ಳಲು ಸರ್ಕಾರದ ಮೇಲೆ ನ್ಯಾಯಾಂಗ ಒತ್ತಡ ಮುಂದುವರಿದಿದೆ.

RELATED ARTICLES
- Advertisment -
Google search engine

Most Popular