Thursday, May 29, 2025
Google search engine

Homeರಾಜ್ಯಬೆಂಗಳೂರಿನಲ್ಲಿ ಕಾಲರಾ ಭೀತಿ : ೪೭ ವಿದ್ಯಾರ್ಥಿನಿಯರು ಅಸ್ವಸ್ಥ, ಇಬ್ಬರಲ್ಲಿ ಸೋಂಕು ಪತ್ತೆ

ಬೆಂಗಳೂರಿನಲ್ಲಿ ಕಾಲರಾ ಭೀತಿ : ೪೭ ವಿದ್ಯಾರ್ಥಿನಿಯರು ಅಸ್ವಸ್ಥ, ಇಬ್ಬರಲ್ಲಿ ಸೋಂಕು ಪತ್ತೆ

ಬೆಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಮೈಸೂರಿನಲ್ಲಿ ಮಹಿಳೆಯೊಬ್ಬರಲ್ಲಿ ಕಾಲರಾ ಸೋಂಕು ಇರುವ ಬಗ್ಗೆ ವರದಿಯಾದ ಬೆನ್ನಲ್ಲೆ, ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಮಹಿಳಾ ಹಾಸ್ಟೆಲ್‌ನ ೪೭ ವಿದ್ಯಾರ್ಥಿನಿಯರು ಏಕಾಏಕಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದಾಗ ಈ ಪೈಕಿ ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ಅಂಶ ಪತ್ತೆಯಾಗಿದೆ.
ಇವರಲ್ಲಿ ೨೮ ಮಂದಿ ಟ್ರಾಮಾ ಕೇರ್ ಸೆಂಟರ್‌ನಲ್ಲಿದ್ದಾರೆ, ೧೩ ಮಂದಿ ಎಚ್ ಬ್ಲಾಕ್‌ನಲ್ಲಿ ಮತ್ತು ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಂತಿ, ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.

ಕಾಲರಾದ ಶಂಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಮಾದರಿಯನ್ನು ವೈದ್ಯರು ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ ಇಬ್ಬರಲ್ಲಿ ಕಾಲರಾ ಅಂಶ ಪತ್ತೆಯಾಗಿದೆ. ಇನ್ನು ಮಹಿಳಾ ಆಯೋಗದ ಅಧ್ಯಕ್ಷೇ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.

ನಾಗಲಕ್ಷ್ಮೀ ಚೌಧರಿ ಅವರು, ಬಿಎಂಸಿಆರ್‌ಐ ಹಾಸ್ಟೆಲ್ ನಲ್ಲಿ ಕನಿಷ್ಠ ಸ್ವಚ್ಛತೆಯಿಲ್ಲದ ಬಗ್ಗೆ ಹಲವು ಬಾರಿ ದೂರು ವಿದ್ಯಾರ್ಥಿಗಳು ನೀಡಿದ್ದಾರೆ. ಯಾವುದು ಸರಿಯಾಗಿಲ್ಲ. ಈ ಬಗ್ಗೆ ನಾನು ಡಾಕ್ಯುಮೆಂಟ್ ಕೇಳಿದ್ದೇನೆ. ಒಂದು ವಾರದಲ್ಲಿ ವರದಿಯನ್ನು ಕೊಡಬೇಕು. ಅಲ್ಲದೆ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ. ಕೋಣೆಗಳು ಚಿಕ್ಕದಾಗಿವೆ. ಸರಿಯಾದ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ವಿಕ್ಟೋರಿಯಾ ಆಸ್ಪತ್ರೆಯಿಂದ ಊಟ ಹೋಗುತ್ತದೆ. ಈ ಬಗ್ಗೆ ನಾನು ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ. ಪ್ರತಿಯೊಂದು ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ಭೇಟಿ ನೀಡುತ್ತೇನೆ. ಅಲ್ಲಿನ ಸಮಸ್ಯೆ ಬಗ್ಗೆ ತಿಳಿಯುತ್ತೇನೆ. ಈಗ ಸುಮೋಟೋ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.

ಒಟ್ಟು ೬ ಕಾಲರಾ ಪ್ರಕರಣ ಪತ್ತೆ
ರಾಜ್ಯದಲ್ಲಿ ಈ ವರ್ಷ ಇದುವರೆಗೆ ಆರು ಕಾಲರಾ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಮಾಹಿತಿ ನೀಡಿದ್ದಾರೆ. ಅದರಲ್ಲಿ ಐದು ಮಾರ್ಚ್‌ನಲ್ಲಿ ವರದಿಯಾಗಿದೆ. ನೀರಿನ ಬಿಕ್ಕಟ್ಟಿನೊಂದಿಗೆ ತೀವ್ರವಾದ ಶಾಖವು ಕಾಲರಾ ಏಕಾಏಕಿ ಭೀತಿಗೆ ಕಾರಣವಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular