ನವದೆಹಲಿ: ಕರ್ತವ್ಯದ ನಿರತ ಸಿಐಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಪಶ್ಚಿಮ ವಿಹಾರ್ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ನಿಲ್ದಾಣದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಹಾರಾಷ್ಟ್ರದ ಗಡ್ಚಿರೋಲಿ ಮೂಲದ ಸಿಐಎಸ್‌ಎಫ್ ಆಧಿಕಾರಿ ಸಹಾರೆ ಕಿಶೋರ್ ಆತ್ಮಹತ್ಯೆ ಮಾಡಿಕೊಂಡವರು. ಇಂದು ಬೆಳಗ್ಗೆ ೭ ಗಂಟೆ ಸಮಯದಲ್ಲಿ ಇಲಾಖೆ ನೀಡಿದ್ದ ಸರ್ವೀಸ್ ರೈಫಲ್‌ನಿಂದಲೇ ಸಿಬ್ಬಂದಿ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಕಿಶೋರ್ ೨೦೨೨ರಿಂದ ದೆಹಲಿಯ ಮೆಟ್ರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇವರ ಕುಟುಂಬ ದೆಹಲಿಯ ನರೇಳದಲ್ಲಿರುವ ಸರ್ಕಾರದ ಕ್ವಾರ್ಟರ್ಸ್‌ನಲ್ಲಿ ಇದ್ದಾರೆ. ಆದರೆ ಸಾವಿಗೆ ಕಾರಣ ಏನೆಂಬುದು ನಿಖರವಾಗಿ ತಿಳಿದು ಬಂದಿಲ್ಲ ಎನ್ನಲಾಗಿದೆ.