Monday, November 3, 2025
Google search engine

Homeರಾಜ್ಯಸುದ್ದಿಜಾಲಬೆಳ್ತಂಗಡಿಯಲ್ಲಿ ಸೌಜನ್ಯ ಪರ ಹೋರಾಟಗಾರರು–ಪೊಲೀಸರ ನಡುವೆ ವಾಗ್ವಾದ

ಬೆಳ್ತಂಗಡಿಯಲ್ಲಿ ಸೌಜನ್ಯ ಪರ ಹೋರಾಟಗಾರರು–ಪೊಲೀಸರ ನಡುವೆ ವಾಗ್ವಾದ

ಮಂಗಳೂರು (ದಕ್ಷಿಣ ಕನ್ನಡ): ಸೌಜನ್ಯ ಪರ ಹೋರಾಟಗಾರರ ಮೇಲೆ ಸುಳ್ಳು ಕೇಸ್‌ಗಳನ್ನು ಹಾಕಲಾಗುತ್ತಿದೆ ಎಂದು ಆರೋಪಿಸಿ ಬೆಳ್ತಂಗಡಿ ತಹಶೀಲ್ದಾರ್‌ ಮೂಲಕ ಸರಕಾರಕ್ಕೆ ಮನವಿ ನೀಡಲು ಬಂದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಸೌಜನ್ಯ ಪರ ಹೋರಾಟಗಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.

ಸೌಜನ್ಯ ಪರ ಹೋರಾಟಗಾರ್ತಿ ಪ್ರಸನ್ನ ರವಿ ಹಾಗೂ ಕೊಲೆಗೀಡಾದ ಸೌಜನ್ಯ ತಾಯಿ ಕುಸುಮಾವತಿ ನೇತೃತ್ವದಲ್ಲಿ ಮನವಿ ನೀಡಲು ಬೆಳ್ತಂಗಡಿ ತಾಲೂಕು ಕಚೇರಿಗೆ ತೆರಳಿದವರನ್ನು ಪೊಲೀಸರು ತಡೆದರು. ಮನವಿ ನೀಡಲು ಅವಕಾಶ ನೀಡುವುದಿಲ್ಲ ಎಂದರು. ಆ ವೇಳೆ ತಾಲೂಕು ಕಚೇರಿಯ ಮುಂದೆಯೇ ಅವರು ಕುಳಿತು ಮನವಿ ನೀಡಿದ ಬಳಿಕವೇ ಹಿಂತಿರುಗುವುದಾಗಿ ಪ್ರಕಟಿಸಿದರು. ಬಳಿಕ ಮೂವರಿಗೆ ತೆರಳಿ ಮನವಿ ಸಲ್ಲಿಸಲು ಅವಕಾಶ ನೀಡಲಾಯಿತು.

ಬೆಳ್ತಂಗಡಿ ತಾಲೂಕು ಕಚೇರಿಯ ಟಪಾಲು ವಿಭಾಗದಲ್ಲಿ ಪ್ರಸನ್ನ ರವಿ, ಕುಸುಮಾವತಿ ಹಾಗೂ ಮೋಹನ್ ಶೆಟ್ಟಿ ತೆರಳಿ ಮನವಿ ಸಲ್ಲಿಸಿದರು. ಮನವಿ ನೀಡಲು ಬಂದವರನ್ನು ತಡೆದ ಬೆನ್ನಲ್ಲೇ ನೂರಾರು ಸಂಖ್ಯೆಯಲ್ಲಿ ಜನರು ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಸೇರಿದ್ದರು. ಆರಂಭದಲ್ಲಿ ಮನವಿ ನೀಡಲು ತಾಲೂಕು ಕಚೇರಿಗೆ ಬಂದಿದ್ದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ತಡೆದಾಗ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ‌ನಡೆಯಿತು. ಈ ವೇಳೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಪ್ರಜ್ವಲ್ ಗೌಡ ಕೆವಿ, ಪ್ರದೀಪ್, ರವೀಂದ್ರ ಶೆಟ್ಟಿ, ಶ್ರೀನಿವಾಸ, ಉದಯ ಕೊಯ್ಯೂರು ಎಂಬವರನ್ನು ಪೊಲೀಸರು ವಶಕ್ಕೆ ಪಡೆದ ಬಳಿಕ ಪೊಲೀಸರು ಅವರನ್ನು ರಿಲೀಸ್ ಮಾಡಿದರು.

RELATED ARTICLES
- Advertisment -
Google search engine

Most Popular