ಬೆಂಗಳೂರು : ಪದ್ಮಶ್ರೀ ಪದ್ಮಭೂಷಣ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪ (94) ಇದರ ರಾಗಿದ್ದು ಇದೀಗ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ಸಿಎಂ ಸಿದ್ದರಾಮಯ್ಯ ಅವರು ಎಸ್ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಎಸ್ ಎಲ್ ಬೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವರು ಆಗ್ರಹಿಸಿದ್ದರು. ಇದೀಗ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಸಿಎಂ ಸಿದ್ದರಾಮಯ್ಯ ಸಹ ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ ಎಂದು ಭೈರಪ್ಪ ಅವರ ಅಂತಿಮ ದರ್ಶನ ಪಡೆದ ಬಳಿಕ ಘೋಷಣೆ ಮಾಡಿದರು.
ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಶಿವರಾಜ ತಂಗಡಗಿ ಸೇರಿದಂತೆ ಹಲವು ಗಣ್ಯರು ಎಸ್ ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಇಂದು ಸಂಜೆ ಮೈಸೂರಿಗೆ ಭೈರಪ್ಪ ಅವರ ಪಾರ್ಥಿವ ಶರೀರ ಸ್ಥಳಾಂತರಿಸಲಾಗುತ್ತದೆ. ನಾಳೆ ಮೈಸೂರು ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಸ್ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ.