Tuesday, July 29, 2025
Google search engine

Homeರಾಜ್ಯತಲಾ ₹50 ಕೋಟಿ ಅನುದಾನ ಬಿಡುಗಡೆ ಕುರಿತಂತೆ ಸಿಎಂ ಸಿದ್ದರಾಮಯ್ಯ ನಾಲ್ಕು ದಿನ ಸಭೆ

ತಲಾ ₹50 ಕೋಟಿ ಅನುದಾನ ಬಿಡುಗಡೆ ಕುರಿತಂತೆ ಸಿಎಂ ಸಿದ್ದರಾಮಯ್ಯ ನಾಲ್ಕು ದಿನ ಸಭೆ

ಬೆಂಗಳೂರು : ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ ವಿಚಾರವಾಗಿ ಇಂದಿನಿಂದ ನಾಲ್ಕು ದಿನಗಳ ಕಾಲ, ಕಾಂಗ್ರೆಸ್ ಶಾಸಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿರುವ ವಿಚಾರವಾಗಿ ಬಿಬಿಎಂಪಿಯ ಶಾಸಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿಲ್ಲ ಎಂದು ತಿಳಿದುಬಂದಿದೆ. ಬೆಂಗಳೂರು ಶಾಸಕರನ್ನು ಹೊರತುಪಡಿಸಿ ಉಳಿದ ಶಾಸಕರ ಜೊತೆಗೆ ಮಾತ್ರ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ಬೆಂಗಳೂರು ಶಾಸಕರಿಗೆ ಬಿಬಿಎಂಪಿ ಮೂಲಕ ಅನುದಾನ ನೀಡಲು ಇದೀಗ ರಾಜ್ಯ ಸರ್ಕಾರ ನಿರ್ಧರಿಸಿದೆ. ಹಾಗಾಗಿ ಬೆಂಗಳೂರಿನ 28 ಶಾಸಕರಿಗೂ ಅನುದಾನ ನೀಡುವ ಹೊಣೆ ಡಿಕೆ ಶಿವಕುಮಾರ್ ಅವರ ಹೆಗಲಿಗಿದೆ. ಈ ಬಗ್ಗೆ ಮಾಹಿತಿ ನೀಡದೆ ಉಳಿದ ಶಾಸಕರ ಜೊತೆಗೆ ಮಾತ್ರ ಸಿಎಂ ಸಿದ್ದರಾಮಯ್ಯ ಸಭೆ ಮಾಡುತ್ತಿದ್ದಾರೆ.ಬಿಬಿಎಂಪಿ ವ್ಯಾಪ್ತಿಯ ಶಾಸಕರಿಗೆ ಸಮಾಧಾನ ಮಾಡಬೇಕಾದ ಹೊಣೆ ಸದ್ಯ ಡಿಕೆ ಶಿವಕುಮಾರ್ ಹೆಗಲಿಗೆ ಇದೆ. ಇದೇ ಕಾರಣಕ್ಕೆ ಡಿಕೆ ಶಿವಕುಮಾರ್ ಬೇಸರಗೊಂಡಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ.

RELATED ARTICLES
- Advertisment -
Google search engine

Most Popular