Tuesday, September 2, 2025
Google search engine

Homeಸ್ಥಳೀಯಸಾರ್ವಜನಿಕ ಅಹವಾಲುಗಳಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ :ಪರಿಹಾರ ಭರವಸೆ

ಸಾರ್ವಜನಿಕ ಅಹವಾಲುಗಳಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ :ಪರಿಹಾರ ಭರವಸೆ

ಮೈಸೂರು: ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 10.50ಕ್ಕೆ ಅವರು ಇಂದು ಬೆಳಗ್ಗೆ 10.50ಕ್ಕೆ ಮೈಸೂರಿನಲ್ಲಿರುವ ತಮ್ಮ ನಿವಾಸದಲ್ಲಿ ಸಾರ್ವಜನಿಕರನ್ನು ಭೇಟಿಯಾಗಿ ಅಹವಾಲುಗಳನ್ನು ಸ್ವೀಕರಿಸಿದರು. ನೂರಕ್ಕೂ ಅಧಿಕ ಸಾರ್ವಜನಿಕರು ವಿವಿಧ ಸಮಸ್ಯೆಗಳ ಬಗ್ಗೆ ತಮ್ಮ ಮನವಿಗಳನ್ನು ಸಲ್ಲಿಸಿದ್ದು, ಸಿಎಂ ಅವುಗಳನ್ನು ಗಮನಪೂರ್ವಕವಾಗಿ ಆಲಿಸಿದರು.

ಸಾಮಾಜಿಕ ನ್ಯಾಯ, ನಾಗರಿಕ ಸೌಲಭ್ಯ, ರೇಷ್ಮೆ ಮತ್ತು ಕೃಷಿ ಬೆಂಬಲ, ಆರೋಗ್ಯ ಹಾಗೂ ನಿರುದ್ಯೋಗ ಸೇರಿದಂತೆ ಹಲವು ಕ್ಷೇತ್ರಗಳ ಕುರಿತು ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಂದಿಟ್ಟರು. ಹೆಚ್ಚಿನವರು ಬಿಪಿಎಲ್ ಕಾರ್ಡ್, ಪಿಂಚಣಿ, ವಸತಿ ಯೋಜನೆ, ಉದ್ಯೋಗ ಖಾತ್ರಿ, ವಿದ್ಯಾರ್ಥಿವೇತನ, ಚಿಕಿತ್ಸಾ ಸಹಾಯದ ಕುರಿತು ಅರ್ಜಿಗಳನ್ನು ಸಲ್ಲಿಸಿದರು.

ಸರ್ಕಾರದ ಪ್ರತಿನಿಧಿಯಾಗಿರುವುದರಿಂದ ಜನರ ಮಾತು ಕೇಳುವುದು ತಮ್ಮ ನೈತಿಕ ಹೊಣೆ ಎಂದು ಸಿದ್ದರಾಮಯ್ಯ ಹೇಳಿದರು. “ನಾನು ಯಾವೆಲ್ಲಾ ಅಹವಾಲುಗಳನ್ನು ಸ್ವೀಕರಿಸಿದ್ದೀನೋ, ಅವನ್ನು ಆದ್ಯತೆ ಮೇರೆಗೆ ಸಂಬಂಧಿತ ಇಲಾಖೆಗಳಿಗೆ ಕಳುಹಿಸಿ, ನಿಭಾಯಿಸಲು ಸೂಚನೆ ನೀಡಲಾಗುವುದು,” ಎಂದು ಅವರು ಭರವಸೆ ನೀಡಿದರು.

2028ಕ್ಕೆ ನಾನು ಸಿಎಂ ರೇಸ್ ನಲ್ಲಿಲ್ಲ: ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ನಾನಿಲ್ಲದಿದ್ದರೂ, ಕಾಂಗ್ರೆಸ್ ಅಧಿಕಾರಕ್ಕೇರುವುದನ್ನು ಖಚಿತಪಡಿಸುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ರು.

ಸಿದ್ದರಾಮಯ್ಯ ಅವರು ಸಿಎಂ ರೇಸ್ ನಲ್ಲಿ ಇರದಿದ್ದರೆ, ಕಾಂಗ್ರೆಸ್ ಮತಗಳು ವಿರೋಧ ಪಕ್ಷಗಳಿಗೆ ಹೋಗುತ್ತವೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ರು‌. ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ನಾನು ಮುಂದಿನ ಸಿಎಂ ರೇಸ್ ನಲ್ಲಿ ಇರುವುದಿಲ್ಲ. ಆದರೆ ನಮ್ಮ ಮತಗಳು ನಿಮಗೆ ಯಾವುದೇ ಕಾರಣಕ್ಕೂ ನಿಮಗೆ ಬರುವುದಿಲ್ಲ. ಏಕೆಂದರೆ ನೀವು ದಲಿತ ವಿರೋಧಿ, ಒಬಿಸಿ ವಿರೋಧಿ ಮತ್ತು ಅಲ್ಪಸಂಖ್ಯಾತರ ವಿರೋಧಿ. ಬಿಜೆಪಿ ಮತ್ತು ಜೆಡಿಎಸ್ ಒಂದಾದರೂ, ಕಾಂಗ್ರೆಸ್‌ನ 141 ಸ್ಥಾನಗಳು ಕಡಿಮೆಯಾಗುವುದಿಲ್ಲ ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಬಿಜೆಪಿಯಾಗಲಿ, ಜೆಡಿಎಸ್‌ ಆಗಲಿ, ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಶಾಸಕ ಬಸನಗೌಡ ಯತ್ನಾಳ್‌ ಅಗಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದರು.

‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವೇ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಆದರೆ, ನಾನು ಮುಖ್ಯಮಂತ್ರಿಯಾಗುವುದಿಲ್ಲ’. ಹೀಗಂತ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸದನದಲ್ಲಿ ಘೋಷಿಸಿದ್ದರು. ‘2028ರಲ್ಲಿ ನಮ್ಮ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರುತ್ತದೆ. ಇದು ನೂರಕ್ಕೆ ನೂರರಷ್ಟು ಸತ್ಯ. ಆದರೆ, ಮುಂದಿನ ಅವಧಿಗೆ ನಾನು ಮುಖ್ಯಮಂತ್ರಿ ಆಗುವುದಿಲ್ಲ. ಇನ್ನು ಜೆಡಿಎಸ್‌ 2-3 ಸ್ಥಾನ ಬಂದರೆ ಅದೇ ಹೆಚ್ಚು. ಹೀಗಾಗಿ ಜೆಡಿಎಸ್‌ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಲಿ’ ಎಂದು ಲೇವಡಿ ಮಾಡಿದ್ದರು. ಆ ಮೂಲಕ 2028ಕ್ಕೆ ಕರ್ನಾಟಕ‌ ಹೊಸ ಸಿಎಂನ್ನು ಕಾಣಲಿದೆ ಅಂತ ಭವಿಷ್ಯ ನುಡಿದಿದ್ದಾರೆ.

ಸಿಎಂ‌ ಗಾದಿ‌ ಮೇಲೆ ಎಐಸಿಸಿ ಅಧ್ಯಕ್ಷ ಖರ್ಗೆ ಕಣ್ಣು: ದಲಿತ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ್‌ ಖರ್ಗೆ ಮುಖ್ಯಮಂತ್ರಿ ರೇಸ್‌ ನಲ್ಲಿದ್ದಾರೆ. ದಲಿತ ಸಮುದಾಯದ ಮುಂಚೂಣಿ ನಾಯಕರಾಗಿರುವ ಮಲ್ಲಿಕಾರ್ಜುನ್‌ ಖರ್ಗೆ ದಲಿತ ಸಮುದಾಯ ಎಂದು ಅವಕಾಶ ಬೇಡ. ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲ ಸಮುದಾಯದ ನಾಯಕ ಎಂದು ಪರಿಗಣಿಸಿ ಅವಕಾಶ ಕೊಡಿ ಎಂದು ಹಲವಾರು ಬಾರಿ ಹೇಳಿದ್ದರು.

RELATED ARTICLES
- Advertisment -
Google search engine

Most Popular