ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ನಿರ್ಮಿಸಲಾದ ಡ್ಯಾಂನಲ್ಲಿ ಕೃಷ್ಣಾ ಭಾಗ್ಯ ಜಾಲ ನಿಯಮಿತದಿಂದ ಗಂಗಾ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಾಳೆ ಕೃಷ್ಣಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗೀನ ಅರ್ಪಿಸಲಿದ್ದಾರೆ. ನಾಳೆ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಬಳ್ಳಾರಿಯ ಜಿಂದಾಲ್‌ಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ೧೧ ಗಂಟೆಗೆ ಜಿಂದಾಲ್‌ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ಆಗಮಿಸಲಿದ್ದಾರೆ.
ಆಲಮಟ್ಟಿಯ ಡ್ಯಾಂ ಆವರಣದಲ್ಲಿ ಮೊದಲು ಕೃಷ್ಣೆಗೆ ಗಂಗಾಪೂಜೆ ನೆರವೇರಿಸಿ ಬಳಿಕ ಬಾಗೀನ ಅರ್ಪಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು ಮುಖಂಡರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜಿಲ್ಲೆಯನ್ನು ಸಂಪುರ್ಣ ಬರಗಾಲ ಜಿಲ್ಲೆಯೆಂದು ಘೋಷಣೆ ಹಾಗೂ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಮನವಿ ಸಲ್ಲಿಸಲಿದ್ದಾರೆ. ಬಳಿಕ ಮದ್ಯಾಹ್ನ ೩ ಕ್ಕೆ ಜಿಂದಾಲ್ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ವಿಜಯಪುರಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಎಸ್ಪಿ ಅವರ ನೇತೃತ್ವದಲ್ಲಿ ಭದ್ರತೆ ನಿಯೋಜಿಸಲಾಗಿದೆ. ಓರ್ವ ಎಎಸ್ಪಿ, ೪ ಡಿಎಸ್ಪಿ, ೭ ಜನ ಇನ್ಸಪೆಕ್ಟರ್ಸ್, ೩೧ ಪಿಎಸ್‌ಐ, ಎಎಸೈ ೨೦, ಹೆಡ್ ಕಾನ್ಸಸ್ಟೇಬಲ್ ಹಾಗೂ ಕಾನ್ಸಸ್ಟೇಬಲ್ ೨೬೦, ಕೆಎಸ್‌ಆರ್ಪಿ ೨ ತುಕಡಿ ಮತ್ತು ಡಿಎಆರ್ ೪ ತುಕಡಿ ಭದ್ರತೆಗೆ ನಿಯೋಜನೆ ಮಾಡಲಾಗಿದೆ.