ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ ನಾಳೆ ಮೈಸೂರಿನಲ್ಲಿ ಪೌರಕಾರ್ಮಿಕರಿಂದ ಸ್ಥಳದಲ್ಲೇ ಅಡುಗೆ ತಯಾರಿ ಮಾಡಿಕೊಂಡು ಸಹಪಂಕ್ತಿ ಭೋಜನ ಕಾರ್ಯಕ್ರಮ ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ. ಶಿವರಾಮು ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೌರ ಸೇನಾನಿಗಳು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಸಾಹಿತಿಗಳು, ಚಿಂತಕರು ಸೇರಿ ಬುದ್ದ ವಿಹಾರ ಆವರಣದಲ್ಲಿ ಬಲ್ಲಾಳ್ ವೃತ್ತದ ಬಳಿ ಸಹಪಂಕ್ತಿ ಭೋಜನ ನಡೆಯಲಿದೆ ಎಂದರು. ಕಾರ್ಯಕ್ರಮಕ್ಕೆ ಪ್ರಗತಿಪರ ಚಿಂತಕರು, ಮುಖಂಡರು ಪಕ್ಷಾತೀತವಾಗಿ ಭಾಗವಹಿಸಲಿದ್ದಾರೆ.
ಸಿದ್ದರಾಮಯ್ಯನವರ ಜಾತ್ಯಾತೀತ ನಿಲುವು ನಮಗೆ ಪ್ರೇರಣೆಯಾಗಿದೆ. ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಎಂದರು. ಉಪ್ಪಾರ ಸಮುದಾಯದ ಜಿಲ್ಲಾಧ್ಯಕ್ಷ ಯೋಗೇಶ್, ಪೌರಕಾರ್ಮಿಕರ ಸಂಘದ ಮುಖಂಡ ಮಾರ ಹಾಗೂ ಇತರರು ಉಪಸ್ಥಿತರಿದ್ದರು.