ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನವೆಂಬರ್ 20 ರಿಂದ ಎರಡು ದಿನಗಳ ಕಾಲ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ನವೆಂಬರ್ 20 ಗುರುವಾರದಂದು ಸಿಎಂ ಸಿದ್ದರಾಮಯ್ಯ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಇಲ್ಲಿನ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ-2025 ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಂತರ ಮಧ್ಯಾಹ್ನ 3 ಗಂಟೆಗೆ ಮೈಸೂರಿಗೆ ಆಗಮಿಸಿ ಅಂದು ಮೈಸೂರಿನಲ್ಲೇ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ನವೆಂಬರ್ 21 ಶುಕ್ರವಾರದಂದು ಬೆಳಿಗ್ಗೆ 10.30ಕ್ಕೆ ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘ ಮೈಸೂರು ಇದರ ಪ್ರಥಮ ವರ್ಷದ ವಾರ್ಷಿಕೋತ್ಸವ ಕನ್ನಡ ರಾಜ್ಯೋತ್ಸವ-2025 ‘’ ಡಿ ದೇವರಾಜ ಅರಸು-ಎಲ್.ಜಿ ಹಾವನೂರು ಪ್ರಶಸ್ತಿ’’ ಪ್ರದಾನ ಸಮಾರಂಭದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ರಾಮಕೃಷ್ಣ ಆಶ್ರಮದ ಶತಮಾನೋತ್ಸವ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ಇದಾದ ಬಳಿಕ ಸಂಜೆ 6 ಗಂಟೆಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಮೈಸೂರು, ಗಾಂಧಿ ವಿಚಾರ ಪರಿಷತ್ತು, ಮೈಸೂರು ಹಾಗೂ ಮೈಸೂರು ವಿಶ್ವ ವಿದ್ಯಾನಿಲಯ ವಿದ್ಯಾರ್ಥಿಗಳು ಸಂಶೋಧಕರು ಆಯೋಜಿಸಿರುವ ರಾಷ್ಟ್ರೀಯ ವಿಚಾರ ಸಂಕಿರಣ –ಪುಸ್ತಕ ಬಿಡುಗಡೆ ಸಮಾರಂಭ ಪ.ಮಲ್ಲೇಶ್ ವಿರಚಿತ ಗಾಂಧಿ ಪ್ರಣೀತ ಧರ್ಮದರ್ಶಿತ್ವ ಮತ್ತು ಬುದ್ದ ನಾಗಾರ್ಜುನರ ಶೂನ್ಯಯಾನ ಪುಸ್ತಕಗಳ ಇಂಗ್ಲೀಷ್ ಅನುವಾದಿತ ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ 8 ಗಂಟೆಗೆ ವಾಪಸ್ ಬೆಂಗಳೂರಿಗೆ ತೆರಳಲಿದ್ದಾರೆ.



