ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಹಾವೇರಿ, ಧಾರವಾಡ, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ. ಮುಂದಿನ ೨೪ ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬಾಗಲಕೋಟೆ, ಗದಗ, ಕೊಪ್ಪಳ, ಕಲಬುರ್ಗಿ, ರಾಯಚೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ೨-೩ ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ತಾಪಮಾನ ೨ ಡಿಗ್ರಿಗಳಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್‌ಎಎಲ್‌ನಲ್ಲಿ ೩೦.೫ ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ೨೨.೦ ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ ೩೧.೨ ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ೨೧.೫ ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ ೩೧.೮ ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ೨೪.೮ ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.