Wednesday, December 10, 2025
Google search engine

HomeUncategorizedಲಕ್ಷ ಲಕ್ಷ ಮೌಲ್ಯದ ಕಾಫಿ ಬೀಜದ ಗೋಣಿಚೀಲ ಕಳ್ಳತನ; ಐವರು ಆರೋಪಿಗಳು ಅರೆಸ್ಟ್

ಲಕ್ಷ ಲಕ್ಷ ಮೌಲ್ಯದ ಕಾಫಿ ಬೀಜದ ಗೋಣಿಚೀಲ ಕಳ್ಳತನ; ಐವರು ಆರೋಪಿಗಳು ಅರೆಸ್ಟ್

ಕಾಫಿ ಬೀಜದ ಲೋಡು ಕೊಂಡೊಯ್ಯುತ್ತಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪುತ್ತೂರು ನಿವಾಸಿ ಆಶ್ಲೇಷ ಭಟ್ ಹಾಗೂ ಅವರ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾ‌ರ್, ವಿಜಯ ಶೆಟ್ಟಿ ಮತ್ತು ಮುಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.
ಪ್ರಕರಣದ ಪಿರ್ಯಾದಿದಾರರಾದ ಪುತ್ತೂರು ಕಬಕ ನಿವಾಸಿ ತೃತೇಶ್ (29) ಎಂಬವರ ದೂರಿನಂತೆ ಸದ್ರಿಯವರು KA 19 AB 2258 ನೇ ಲಾರಿಯ ಮಾಲಕ ಮತ್ತು ಚಾಲಕನಾಗಿದ್ದು, ದಿನಾಂಕ: 03-12-2025 ರಂದು ಪಿರಿಯಾ ಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯೊಂದರಿಂದ ತಲಾ 60 ಕೆಜಿ ತೂಕದ 320 ಗೋಣಿ ಚೀಲ ಬ್ಯಾಗ್ ಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ತೆರಳುತ್ತಿದ್ದವರು ಅದೇ ದಿನ ರಾತ್ರಿ ಪುತ್ತೂರಿಗೆ ತಲುಪಿ, ಕಬಕ ನೆಹರೂ ನಗರ ಎಂಬಲ್ಲಿ ರಸ್ತೆ ಬದಿಯಲ್ಲಿ ತನ್ನ ಲಾರಿಯನ್ನು ನಿಲ್ಲಿಸಿ ಡೋರ್ ಲಾಕ್ ಮಾಡಿ ತನ್ನ ಮನೆಗೆ ತೆರಳಿದ್ದರು. ದಿನಾಂಕ: 04-12-2025 ರಂದು ಬೆಳಿಗ್ಗೆ ಮರಳಿ ಬಂದು ತನ್ನ ಲಾರಿಯನ್ನು ಚಲಾಯಿಸುತ್ತಾ ಮಧ್ಯಾಹ್ನ ವೇಳೆ ಮಂಗಳೂರಿನ ಬಂದರಿಗೆ ತಲುಪಿದ್ದರು. ಇದೇ ವೇಳೆ ಕಂಪೆನಿಯವರು ಕ್ವಾಲಿಟಿ ಚೆಕ್ ಮಾಡಲು ಬಂದಾಗ, ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಕಂಡು ಬಂದಿದ್ದು, ಲೋಡನ್ನು ಪರಿಶೀಲಿಸಿದಾಗ, ಲಾರಿಯಲ್ಲಿದ್ದ ಕಾಫಿ ಬೀಜ ತುಂಬಿದ ಗೋಣಿಚೀಲಗಳ ಪೈಕಿ ಸುಮಾರು ರೂ 21,44,000 ಮೌಲ್ಯದ 80 ಗೋಣಿ ಚೀಲಗಳು ಕಳವಾಗಿರುವುದು ಕಂಡು ಬಂದಿದೆ. ಪಿರ್ಯಾದಿರವರ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ, ಅ.ಕ್ರ: 120/2025 ಕಲಂ: 303(2) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಈ ಆರೋಪಿಗಳನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ ಎರಡು ಆಟೋ , ಒಂದು ಗೂ್ಡ್ಸ ಟೆಂಪೋ ಗಳನ್ನು ಹಾಗೂ ಕಳವಾದ 60 ಕೆಜಿ ತೂಕದ ಕಾಫಿ ತುಂಬಿದ 80 ಚೀಲಗಳನ್ನು ಸ್ವಾಧೀನಪಡಿಸಲಾಗಿದೆ.

RELATED ARTICLES
- Advertisment -
Google search engine

Most Popular