Sunday, September 7, 2025
Google search engine

Homeರಾಜ್ಯಸುದ್ದಿಜಾಲಸಾಮೂಹಿಕ ಧಾರ್ಮಿಕ ಆಚರಣೆಗಳು ಐಕ್ಯತೆ ಗಟ್ಟಿಗೊಳಿಸುತ್ತವೆ: ಎಸ್‌ಕೆಡಿಜಿವೈ ಟ್ರಸ್ಟ್ ನಿರ್ದೇಶಕಿ ಲೀಲಾವತಿ

ಸಾಮೂಹಿಕ ಧಾರ್ಮಿಕ ಆಚರಣೆಗಳು ಐಕ್ಯತೆ ಗಟ್ಟಿಗೊಳಿಸುತ್ತವೆ: ಎಸ್‌ಕೆಡಿಜಿವೈ ಟ್ರಸ್ಟ್ ನಿರ್ದೇಶಕಿ ಲೀಲಾವತಿ

ಪಿರಿಯಾಪಟ್ಟಣ: ಸಾಮೂಹಿಕ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿನ ಸಂಬಂಧಗಳು ಗಟ್ಟಿಯಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ತಿಳಿಸಿದರು. 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಟ್ಟದಪುರ ಕಛೇರಿ ವ್ಯಾಪ್ತಿಯ ಚಪ್ಪರದಹಳ್ಳಿ ಗ್ರಾಮದಲ್ಲಿ ಚಿಕ್ಕ ನೇರಳೆ ವಲಯದ ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ ನಡೆದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವರಮಹಾಲಕ್ಷಿ ಅಂದರೆ ಸಂಪತ್ತು ದುಡ್ದು ಮಾತ್ರವಲ್ಲ, ನಮ್ಮಲ್ಲಿನ ಜ್ಞಾನಾರ್ಜನೆ ಹಾಗೂ ನಮಗೆ ಸಿಗುವ ಅವಕಾಶವನ್ನು ಕೂಡ ನಾವು ವರ ಎಂದುಕೊಳ್ಳಬೇಕು, ಹಿಂದಿನ ಯುಗಕ್ಕೂ ಪ್ರಸ್ತುತ ಯಾಂತ್ರಿಕ ಯುಗಕ್ಕೂ ಸಾಕಷ್ಟು ವ್ಯತ್ಯಾಸಗಳಿದ್ದು ಕಾಲ ಬದಲಾದಂತೆ ನಮ್ಮಲ್ಲಿನ ಜೀವನ ಪದ್ಧತಿ ಹಾಗೂ ಧಾರ್ಮಿಕ ಆಚರಣೆಗಳು ಕೂಡ ಬದಲಾಗುತ್ತಿವೆ ಈ ನಿಟ್ಟಿನಲ್ಲಿ ನಾವೆಲ್ಲ ಒಂದು ಎಂಬ ಐಕ್ಯತ ಭಾವನೆ ಮೂಡುವ ಉದ್ದೇಶದಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ನಿವೃತ್ತ ಪ್ರಾಂಶುಪಾಲರಾದ ಜಿ.ಆರ್ ಮಂಜುನಾಥ್ ಅವರು ಮಾತನಾಡಿ ಸಮಾಜದ ಅಭಿವೃದ್ಧಿಗಾಗಿ ಸರ್ಕಾರ ಮಾಡುವ ಕೆಲಸವನ್ನು ಸರ್ಕಾರೇತರ ಸಂಸ್ಥೆಯಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿರುವುದು ಶ್ಲಾಘನೀಯ ಎಂದರು. 

ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎ.ಎಚ್ ಚಂದ್ರಶೇಖರ್ ಅವರು ಮಾತನಾಡಿ ಮಹಿಳೆಯರು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು, ಒಂದು ಕುಟುಂಬದ ಏಳಿಗೆಯಲ್ಲಿ ಮಹಿಳೆಯ ಪಾತ್ರ ಅಪಾರವಾಗಿದ್ದು ಮಹಿಳಾ ಸಬಲೀಕರಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಮ್ಮಿಕೊಂಡಿರುವ ಕಾರ್ಯ ಇತರರಿಗೆ ಮಾದರಿಯಾಗಿದೆ ಎಂದರು.

ಬೆಟ್ಟದಪುರ ವಲಯ ಯೋಜನಾಧಿಕಾರಿ ಸಂತೋಷ್ ಕುಮಾರ್ ಜೈನ್ ಅವರು ಮಾತನಾಡಿ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗಡೆ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮ ಅವರ ಮಾರ್ಗದರ್ಶನದಲ್ಲಿ ಸಂಸ್ಥೆ ವತಿಯಿಂದ ಮಹಿಳಾ ಸಬಲೀಕರಣ ಜೊತೆ ಹಲವು ಧಾರ್ಮಿಕ ಶೈಕ್ಷಣಿಕ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದ ಏಳಿಗೆಗೆ ಶ್ರಮಿಸಲಾಗುತ್ತಿದೆ ಎಂದರು.

ಈ ವೇಳೆ ಯೋಜನೆ ವತಿಯಿಂದ ವಿವಿಧ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.

ಈ ಸಂದರ್ಭ ವರಮಹಾಲಕ್ಷಿ ಸಮಿತಿಯ ಅಧ್ಯಕ್ಷ ಸಿ.ಎ ನಂದೀಶ್, ಪದಾಧಿಕಾರಿ ಸಿ.ಎಸ್ ದಿನೇಶ್, ಗ್ರಾ.ಪಂ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷೆ ಸುನಿತಾ, ಯಜಮಾನರುಗಳಾದ ಸಿ.ಎನ್ ಬಸವರಾಜು, ಪಟೇಲ್ ಕಾಳೇಗೌಡ, ಸಿ.ಎನ್ ಕಾಳೇಗೌಡ, ಜನಜಾಗೃತಿ ವೇದಿಕೆ ಸದಸ್ಯ ಅಂಬಲಾರೆ ರಾಮಚಂದ್ರ, ಗ್ರಾ.ಪಂ ಡಿಇಒ ಮಹೇಂದ್ರ, ಜ್ಞಾನ ವಿಕಾಸ ಯೋಜನಾಧಿಕಾರಿ ಮಮಿತಾ, ಮೇಲ್ವಿಚಾರಕರಾದ ಕೀರ್ತಿ, ಪೂಜಾ ಸಮಿತಿ ಪದಾಧಿಕಾರಿಗಳು, ಯೋಜನೆಯ ಸೇವಾಪ್ರತಿನಿಧಿಗಳು, ಸಿಬ್ಬಂಧಿ ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಇದ್ದರು.

RELATED ARTICLES
- Advertisment -
Google search engine

Most Popular