Monday, November 3, 2025
Google search engine

Homeಸಿನಿಮಾನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು

ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ದೂರು

ಬೆಂಗಳೂರು : ಚಂದನವನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮನೋಜ್ ಎಂಬಾತ ನಟ ಧ್ರುವ ಸರ್ಜಾ, ಮತ್ತವರ ಮ್ಯಾನೇಜರ್, ಚಾಲಕ ಹಾಗೂ ಫಾನ್ಸ್ ಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಇವರುಗಳಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಪ್ರತಿನಿತ್ಯ ನಮ್ಮ ಮನೆ ಮುಂದೆ ಫ್ಯಾನ್ಸ್ಗಳು ಬೈಕ್ ಪಾರ್ಕ್ ಮಾಡುತ್ತಾರೆ. ಅಲ್ಲದೇ ಮನೆಯ ಮುಂದೆಯೇ ಧೂಮಪಾನ ಮಾಡುತ್ತಾರೆ. ಮನೆಯ ಗೋಡೆಯ ಮೇಲೆ ಉಗಿಯುತ್ತಾರೆ. ಇದ್ದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ಪ್ರತಿನಿತ್ಯ ತೊಂದರೆಯಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಟನ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ದೂರಿನನ್ವಯ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ.

RELATED ARTICLES
- Advertisment -
Google search engine

Most Popular