Tuesday, June 9, 2026
Google search engine

Homeರಾಜ್ಯಸುದ್ದಿಜಾಲಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪಾರದರ್ಶಕವಾಗಿ ನಡೆಸಿ: ನಿಸರ್ಗ ಪ್ರಿಯ

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪಾರದರ್ಶಕವಾಗಿ ನಡೆಸಿ: ನಿಸರ್ಗ ಪ್ರಿಯ

ಪಿರಿಯಾಪಟ್ಟಣ: ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಪಾರದರ್ಶಕ ಹಾಗೂ ಯಶಸ್ವಿಯಾಗಿ ನಡೆಸುವಂತೆ ತಹಶೀಲ್ದಾರ್ ನಿಸರ್ಗ ಪ್ರಿಯ ತಿಳಿಸಿದರು.

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಪಟ್ಟಣದ ಡಿ.ದೇವರಾಜ ಅರಸು ಕಲಾಭವನದಲ್ಲಿ ಆಯೋಜಿಸಿ ಅವರು ಮಾತನಾಡಿದರು, ಮತದಾನ ಮಾಡಲು ಅರ್ಹರಾದ ಯಾವುದೇ ಒಬ್ಬ ನಾಗರಿಕ ಮತದಾನದ ಹಕ್ಕಿನಿಂದ ವಂಚಿತರಾಗಬಾರದು, 18 ವರ್ಷ ತುಂಬಿದ ಪ್ರತಿಯೊಬ್ಬ ಯುವ ಮತದಾರರನ್ನು ಗುರುತಿಸಿ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತರಬೇತಿ ಅಧಿಕಾರಿಗಳು ಮಾತನಾಡಿ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಅತ್ಯಂತ ಜವಾಬ್ದಾರಿಯುತ ಕೆಲಸವಾಗಿದೆ, ಅರ್ಹ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ಫಾರ್ಮ್-6 ಅನ್ನು ಸರಿಯಾಗಿ ಭರ್ತಿ ಮಾಡಿಕೊಳ್ಳುವುದು, ಹೆಸರು ಭಾವಚಿತ್ರ ವಯಸ್ಸು ಅಥವಾ ವಿಳಾಸದಲ್ಲಿರುವ ತಪ್ಪುಗಳನ್ನು ಸರಿಪಡಿಸಲು ಫಾರ್ಮ್-8 ರ ಬಳಕೆ ಮಾಡುವುದು, ಮರಣ ಹೊಂದಿದವರ ಅಥವಾ ಕಾಯಂ ಆಗಿ ಬೇರೆಡೆಗೆ ಸ್ಥಳಾಂತರಗೊಂಡವರ ಹೆಸರುಗಳನ್ನು ನಿಯಮಾನುಸಾರ ಪಟ್ಟಿಯಿಂದ ತೆಗೆಯಬೇಕು,

ಬಿಎಲ್ಒ ಆ್ಯಪ್ ಮೂಲಕ ಡಿಜಿಟಲ್ ರೂಪದಲ್ಲಿ ದತ್ತಾಂಶಗಳನ್ನು ಅತ್ಯಂತ ನಿಖರವಾಗಿ ಅಪ್‌ಲೋಡ್ ಮಾಡಬೇಕು, ಮತಗಟ್ಟೆ ಅಧಿಕಾರಿಗಳು ತಮಗೆ ನಿಗದಿಪಡಿಸಿದ ಮತಗಟ್ಟೆ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವಾಗ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ನಿಖರವಾದ ಮಾಹಿತಿ ಕರಗತ ಮಾಡಿಕೊಳ್ಳಬೇಕು ಈ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು. 

ಈ ಸಂದರ್ಭ ಶಿರಸ್ತೇದಾರ್ ವಿನೋದ್ ಕುಮಾರ್, ಚುನಾವಣಾ ವಿಭಾಗದ ಅಧಿಕಾರಿಗಳು, ಸೂಪರ್‌ವೈಸರ್‌ಗಳು ಹಾಗೂ ಎಲ್ಲಾ ಮತಗಟ್ಟೆ ಅಧಿಕಾರಿಗಳು ಇದ್ದರು.

RELATED ARTICLES
- Advertisment -
Google search engine

Most Popular