ಬಾಗಲಕೋಟೆ : ಆಡಳಿತಾರೂಢ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಕಣವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.
ಬಾಗಲಕೋಟೆ ಗೆಲ್ಲುವ ಮೂಲಕ ಕಾಂಗ್ರೆಸ್ ಕ್ಷೇತ್ರವನ್ನು ಮರಳಿ ತನ್ನ ತನ್ನ ತೆಕ್ಕೆಗೆ ಪಡೆದುಕೊಂಡಿದೆ.
ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಪೈಪೋಟಿ ನೀಡಿದ್ದರಾದರೂ ಅಂತಿಮವಾಗಿ ಸೋಲುಂಡಿದ್ದಾರೆ.
ಮಾಜಿ ಸಚಿವ ಎಚ್.ವೈ.ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರಕ್ಕೆ ಎ.9ರಂದು ಉಪಚುನಾವಣೆ ನಡೆದಿತ್ತು.



