Wednesday, June 18, 2025
Google search engine

Homeಸ್ಥಳೀಯಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ, ಮುಖ್ಯಮಂತ್ರಿಗಳು ಪರಿಶೀಲಿಸಬೇಕು: ಎಂ.ಲಕ್ಷ್ಮಣ್

ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ, ಮುಖ್ಯಮಂತ್ರಿಗಳು ಪರಿಶೀಲಿಸಬೇಕು: ಎಂ.ಲಕ್ಷ್ಮಣ್

ಮೈಸೂರು: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದು ಮೈಸೂರು-ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ ಹೊರಹಾಕಿದ್ದಾರೆ.

ಇಂದು ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಮ್ಮ ಗ್ಯಾರಂಟಿ ವಿರುದ್ಧ ಮಾತಾನಾಡುತ್ತಿತ್ತು. ಜನ ಅವರನ್ನು ಬೆಂಬಲಿಸಿದ್ದಾರೆ. ಹಾಗಾಗಿ ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ ಅಂತಲೇ ಅಲ್ವಾ ಗ್ಯಾರಂಟಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಈಗ ಮರು ಪರಿಶೀಲನೆ ಮಾಡಬೇಕು. ಈ ಬಗ್ಗೆ ಸಿಎಂ ಗಮನಹರಿಸಬೇಕು. ೭೦% ರಷ್ಟು ಮೇಲ್ವರ್ಗದವರು ಈ ಯೋಜನೆ ಫಲಾನುಭವಿಗಳಾಗಿದ್ದಾರೆ. ಆದರೆ ಅದನ್ನು ಜನರು ತಿರಸ್ಕಾರ ಮಾಡಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular