Saturday, April 18, 2026
Google search engine

Homeರಾಜಕೀಯಮಹಿಳಾ ಹಕ್ಕಿಗೆ ಅಡ್ಡಿಯಾದ ಕಾಂಗ್ರೆಸ್ : ಹೆಚ್.ಡಿ.ಕುಮಾರಸ್ವಾಮಿ ಟೀಕೆ

ಮಹಿಳಾ ಹಕ್ಕಿಗೆ ಅಡ್ಡಿಯಾದ ಕಾಂಗ್ರೆಸ್ : ಹೆಚ್.ಡಿ.ಕುಮಾರಸ್ವಾಮಿ ಟೀಕೆ

ನವದೆಹಲಿ :  ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲುಂಟಾಗಿದ್ದು, ಈ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,  30 ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ವಾಗ್ದಾಳಿ ನಡೆಸಿದೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಕಾಂಗ್ರೆಸ್ ವಿರುದ್ದ ಕೆಂಡಕಾರಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, 1996 ರಿಂದ 2026 ಕರಾಳ ಇತಿಹಾಸ ಮರುಕಳಿಸಿದೆ.  ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು. ಅಂದು ಹೆಚ್.ಡಿ. ದೇವೇಗೌಡರ ನೇತೃತ್ವದ ಸಂಯುಕ್ತ ರಂಗ ಸರಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು.

ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದ್ದವು. ಇಂದು ಆವತ್ತು ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಾ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಪ್ರಧಾನಿ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ  ಎಂದು ಹರಿಹಾಯ್ದಿದ್ದಾರೆ.

ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ. ರಾಷ್ಟ್ರದ ನಾರಿಶಕ್ತಿಗೆ ನನ್ನ ಮನವಿ ಇಷ್ಟೇ, ನಿಮಗೆ ನಿರಾಶೆ ಬೇಕಿಲ್ಲ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೊಂದು ದಿನ ನಿಮಗೆ ಅಗ್ರಮನ್ನಣೆ ಸಿಕ್ಕೇ ಸಿಗುತ್ತದೆ. 33% ಮಹಿಳಾ ಮೀಸಲು ಗುರಿ ಸಾಧಿಸುವುದು ಶತಸಿದ್ಧ ಎಂದು  ಹೆಚ್ ಡಿಕೆ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular