Monday, December 8, 2025
Google search engine

Homeರಾಜ್ಯಸುದ್ದಿಜಾಲದಂಪತಿಗಳು ಒಂದು ಅಥವಾ ಎರಡು ಮಕ್ಕಳ ಮಾತ್ರ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ.

ದಂಪತಿಗಳು ಒಂದು ಅಥವಾ ಎರಡು ಮಕ್ಕಳ ಮಾತ್ರ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ.

ವರದಿ :ಸ್ಟೀಫನ್ ಜೇಮ್ಸ್.

ಜನಸಂಖ್ಯೆ ನಿಯಂತ್ರಣ ಮಾಡಬೇಕು. ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಜಾತಿ, ವರ್ಗ ಪದ್ಧತಿ, ಅಸ್ಪೃಶ್ಯತೆ ಇವೆಲ್ಲವೂ ನಿರ್ಮೂಲನೆಯಾಗಬೇಕು ಎಂದು ಹೇಳಿದರು.

ಧಾರವಾಡ: ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ ದಂಪತಿಗಳು ಒಂದು ಅಥವಾ ಎರಡು ಮಕ್ಕಳನ್ನು ಮಾತ್ರ ಮಾಡಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ ದಂಪತಿಗಳು ಒಂದು ಅಥವಾ ಎರಡು ಮಕ್ಕಳನ್ನು ಮಾತ್ರ ಮಾಡಿಕೊಳ್ಳಬೇಕು’ ಎಂದರು.

ದೇಶದ ಜನಸಂಖ್ಯೆ ಹೆಚ್ಚಾಗಿದೆ ‘ಜನಸಂಖ್ಯೆಯಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿದೆ. ದಂಪತಿ ಒಂದು ಅಥವಾ ಎರಡು ಮಕ್ಕಳು ಮಾಡಿಕೊಳ್ಳಬೇಕು. ಜನಸಂಖ್ಯೆ ನಿಯಂತ್ರಣ ಮಾಡಬೇಕು. ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಜಾತಿ, ವರ್ಗ ಪದ್ಧತಿ, ಅಸ್ಪೃಶ್ಯತೆ ಇವೆಲ್ಲವೂ ನಿರ್ಮೂಲನೆಯಾಗಬೇಕು ಎಂದು ಹೇಳಿದರು.

‘ನಾವೆಲ್ಲರೂ ಮನುಷ್ಯರು, ಮನುಷ್ಯರಾಗಿ ಬದುಕಬೇಕು. ಈ ಹಿನ್ನೆಲೆಯಲ್ಲಿ ಅಂತರ ಜಾತಿಯ ವಿವಾಹಗಳು ಹೆಚ್ಚೆಚ್ಚು ಆಗಬೇಕು. ಆದರೆ, ದೇಶದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಸಾಮೂಹಿಕ ಮದುವೆಯಲ್ಲಿ ಭಾಗಿಯಾದವರೆಲ್ಲರಿಗೂ ಒಂದು ಅಥವಾ ಎರಡು ಮಕ್ಕಳನ್ನ ಮಾತ್ರ ಮಾಡಿಕೊಳ್ಳಬೇಕು ಎಂದರು.

ಶಾಸಕ ಕೋನರೆಡ್ಡಿ ಕುರಿತು ಮೆಚ್ಚುಗೆ

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಶಾಸಕ ಕೋನರೆಡ್ಡಿ ಕುರಿತು ಮಾತನಾಡಿದ್ದು, ‘ಕೋನರೆಡ್ಡಿ ಅವರು ಕೇವಲ ಮಗನ ಮದುವೆಯನ್ನು ಮಾಡದೇ, 75 ಜೋಡಿಗಳಿಗೆ ಸಾಮೂಹಿಕ ವಿವಾಹವನ್ನು ಏರ್ಪಡಿಸಿರುವುದು ಅತ್ಯಂತ ಸಂತೋಷಕರ ಮತ್ತು ಮಾದರಿ ಕೆಲಸ. ಕೋನರೆಡ್ಡಿ ಅವರು ಈ ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿದ್ದು, ಇದು ಕೇವಲ ಮದುವೆ ಅಷ್ಟೆ ಅಲ್ಲ, ಒಂದು ದೊಡ್ಡ ಜಾತ್ರೆಯಂತೆ ಭಾಸವಾಗುತ್ತಿದೆ ಎಂದು ಬಣ್ಣಿಸಿದರು.

‘ಮುಸ್ಲಿಂ, ಕ್ರಿಶ್ಚಿಯನ್ ಜನಾಂಗದವರೂ ಹಿಂದೂಗಳ ಜೊತೆ ಮದುವೆ ಮಾಡಿಕೊಳ್ಳುತ್ತಿದ್ದಾರೆ. ನಾವೆಲ್ಲರೂ ಮನುಷ್ಯರು, ಮನುಷ್ಯರಾಗಿ ಬದುಕಬೇಕು. ಈ ಹಿನ್ನೆಲೆಯಲ್ಲಿ ಅಂತರ್ಜಾತಿಯ ವಿವಾಹಗಳು ಹೆಚ್ಚೆಚ್ಚು ಆಗಬೇಕು. ಹಿಂದೂ ಧರ್ಮದಲ್ಲಿನ ಜಾತಿ ಪದ್ಧತಿಯನ್ನು ಪ್ರಶ್ನಿಸಿದ ಸಿದ್ದರಾಮಯ್ಯ, ಬಸವಣ್ಣನವರು ದಲಿತರು ಮತ್ತು ಮೇಲ್ಜಾತಿಯವರ ನಡುವೆ ಮದುವೆ ಮಾಡಿಸಿದ್ದರು ಎಂಬುದನ್ನು ಸ್ಮರಿಸಿದರು.

ಇಂತಹ ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸಮಾನತೆಯನ್ನು ತರಲು ಸಹಕಾರಿ ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಅವರು, ತಮಿಳುನಾಡಿನ ಸಂಸ್ಕೃತಿಯನ್ನು ರಾಜ್ಯದಲ್ಲಿ ಅನುಸರಿಸುವ ಪ್ರಯತ್ನ ನಡೆಯುತ್ತದೆ ಎಂದೂ ಪ್ರಸ್ತಾಪಿಸಿದರು.

ಇದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಹೊಸ ಬಾಳಿಗೆ ಕಾಲಿಟ್ಟ ವಧು- ವರರು ಆದರ್ಶ ದಂಪತಿಗಳಾಗಬೇಕು ಎಂದು ಹೇಳಿದರು. ‘ಸ್ವಂತ ಉದ್ಯೋಗ ಆರಂಭಿಸಬೇಕು. ಉದ್ಯೋಗದಾತರಾಗಬೇಕು. ಉತ್ತಮ ಬದುಕು ಕಟ್ಟಿಕೊಳ್ಳಬೇಕು’ ಎಂದರು.

ಅಂತೆಯೇ ಕುವೆಂಪು ಹೇಳಿದಂತೆ ನಾಡನ್ನುಸರ್ವ ಜನಾಂಗದ ಶಾಂತಿಯ ತೋಟವಾಗಿಸುವುದು ನಮ್ಮ ಆಶಯ. ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವಗಳು ನಮ್ಮ ಧ್ಯೇಯ ಎಂದರು.

ಈ ವಿಶೇಷ ಕಾರ್ಯಕ್ರಮದಲ್ಲಿ 75 ಜೋಡಿ ದಾಂಪತ್ಯಕ್ಕೆ ಕಾಲಿಟ್ಟರು. ಶಾಸಕ ಎನ್.ಎಚ್.ಕೋನರಡ್ಡಿ ಪುತ್ರ ನವೀನ ಕುಮಾರ್- ಸಹನಾ ಆರತಕ್ಷತೆ ನಡೆಯಿತು. ಸಚಿವರಾದ ಸಂತೋಷ ಲಾಡ್, ಕೃಷ್ಣ ಬೈರೇಗೌಡ, ಡಾ ಎಚ್.ಸಿ. ಮಹದೇವಪ್ಪ, ಶಾಸಕ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ ಇದ್ದರು.

RELATED ARTICLES
- Advertisment -
Google search engine

Most Popular