Thursday, February 5, 2026
Google search engine

Homeಅಪರಾಧಕ್ರೂಸರ್–ಕ್ಯಾಂಟರ್ ಅಪಘಾತ; ಮೂವರು ರೈತ ಮಹಿಳೆಯರು ಸ್ಥಳದಲ್ಲೇ ಸಾವು

ಕ್ರೂಸರ್–ಕ್ಯಾಂಟರ್ ಅಪಘಾತ; ಮೂವರು ರೈತ ಮಹಿಳೆಯರು ಸ್ಥಳದಲ್ಲೇ ಸಾವು

ಗದಗ : ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರೋಣ ತಾಲೂಕಿನ ಜಿಗಳೂರ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಗಜೇಂದ್ರಗಡದ ಶಿವಾಜಿಪೇಟೆ ನಿವಾಸಿಗಳಾದ ಅನ್ನಪೂರ್ಣ (56), ಸಂಗೀತ ಹೊಸಮನಿ (48), ಮರಿಯಂಬೂ ಹುನಗುಂದ (55) ಎಂದು ಗುರುತಿಸಲಾಗಿದೆ. ಇವರು ರೋಣಕ್ಕೆ ಕಡಲೆ ಕೀಳಲು ಹೊರಟಿದ್ದರು. ಅಪಘಾತದಲ್ಲಿ ಗಾಯಗೊಂಡವರನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.

ಈ ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಸ್ಪತ್ರೆ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES
- Advertisment -
Google search engine

Most Popular