ಮೈಸೂರಿ: ನಗರದ ವಿಜಯ ವಿಠಲ ವಿದ್ಯಾ ಶಾಲೆಯಲ್ಲಿ ಸಾಂಸ್ಕೃತಿಕ ಉತ್ಸವವನ್ನು ವೇದಿಕೆಯ ಮೇಲಿನ ಗಣ್ಯರು ಉದ್ಘಾಟಿಸಿದರು.
ವಿಜಯ ವಿಠಲ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಆರ್.ವಾಸುದೇವ್ ಭಟ್ ಮಾತನಾಡುತ್ತಾ, ಮುಕ್ತ ದಿನದ ವಿಚಾರ ತಿಳಿಸಿ ಮಕ್ಕಳನ್ನು, ಶಿಕ್ಷಕರನ್ನು ಅಭಿನಂದಿಸಿದರು.ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ನಮ್ಮ ಸಂಸ್ಥೆ ಪ್ರಯತ್ನಿಸುತ್ತಿದೆ.ಮಕ್ಕಳಲ್ಲಿ ವ್ಯವಹಾರ ಜ್ಞಾನ ಹಾಗೂ ಸಹಾಯ ಮನೋಭಾವ ಬೆಳೆಸುವ ದೃಷ್ಟಿಯಿಂದ ಶನಿವಾರ ಫನ್ ಫೇರ್ ನಡೆಸಲಾಗುತ್ತಿದೆ.ಅದರಲ್ಲಿ ಬಂದ ಹಣವನ್ನು ಬಡ ವಿದ್ಯಾರ್ಥಿಗಳ ಓದಿಗೆ ಉಪಯೋಗಿಸಲಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀಯುತ.ರಾಜು.ಸಿ.ಎನ್.ಕ್ಷೇತ್ರ ಶಿಕ್ಷಣಾಧಿಕಾರಿಗಳು,ದಕ್ಷಿಣ ವಲಯ, ಮೈಸೂರು ಇವರು ಮಾತನಾಡುತ್ತಾ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬುದು ಸಂವಿಧಾನದ ಆಶಯ.ಇತ್ತೀಚಿನ ದಿನಗಳಲ್ಲಿ ನೀತಿ ಶಿಕ್ಷಣ ಮರೀಚಿಕೆಯಾಗುತ್ತಿದೆ.ಆ ನಿಟ್ಟಿನಲ್ಲಿ ಸಂಸ್ಥೆಗಳ ಪಾತ್ರ ಬಹಳ ಮುಖ್ಯ ಎಂದು ತಿಳಿಸಿದರು.ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಪೋಷಕರಿಂದ ಆಗಬೇಕು.ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿದೆ.ಮೌಲ್ಯಗಳು ಶಿಕ್ಷಣದಿಂದ ಬರುವಂತದ್ದಲ್ಲ,ಮನೆಯಲ್ಲಿ ಪೋಷಕರು ಮಾನವೀಯ ಮೌಲ್ಯಗಳನ್ನು ತುಂಬುವ ಕೆಲಸ ಮಾಡಬೇಕು ಎಂದು ತಿಳಿಸಿದರು.ಪ್ರತಿ ವರ್ಷ ವಿಜಯ ವಿಠಲ ಸಂಸ್ಥೆ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮ ಫಲಿತಾಂಶ ನೀಡುವಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.ಇನ್ನೂ ಈ ಸಂಸ್ಥೆ ಸಾಧನೆಯ ಹಾದಿಯಲ್ಲಿ ಸಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದ ವಿಶೇಷವೆಂದರೆ ತಮ್ಮ ಪ್ರತಿಭೆಯನ್ನು ಗುರುತಿಸಿಗೊಂಡ ಕಿಂಡರ್ ಗಾರ್ಟನ್, ಎಲ್.ಕೆ.ಜಿ. ಮತ್ತು ಯು.ಕೆ.ಜಿ ಪುಟ್ಟ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡುವ ಮೂಲಕ ಅಭಿನಂದಿಸಿ ಪ್ರೋತ್ಸಾಹಿಸಲಾಯಿತು. ಹಾಗೂ ಇವರ ಮನಸೆಳೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರೆಲ್ಲರ ಮನಸೂರೆಗೊಂಡಿತು.
ಈ ಸಂದರ್ಭದಲ್ಲಿ ವಿಜಯ ವಿಠಲ ವಿದ್ಯಾ ಶಾಲೆಯ ಪ್ರಾಂಶುಪಾಲ ವೀಣಾ.ಎಸ್.ಎ, ವಿಜಯ ವಿಠಲ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ.ಸತ್ಯಪ್ರಸಾದ್ ರವರು, ವಿವಿಧ ವಿಭಾಗದ ಮುಖ್ಯಸ್ಥರು,ಪೋಷಕರು, ಶಿಕ್ಷಕರು, ಮಕ್ಕಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
