Saturday, May 24, 2025
Google search engine

Homeರಾಜ್ಯಸುದ್ದಿಜಾಲಮೇ 23ರಂದು ಬಂಗಾಳಕೊಲ್ಲಿಗೆ ಅಪ್ಪಳಿಸಲಿರುವ ಚಂಡಮಾರುತ: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ

ಮೇ 23ರಂದು ಬಂಗಾಳಕೊಲ್ಲಿಗೆ ಅಪ್ಪಳಿಸಲಿರುವ ಚಂಡಮಾರುತ: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ

ಚಂಡಮಾರುತವು ಮೇ 23ರಂದು ಬಂಗಾಳಕೊಲ್ಲಿಗೆ ಅಪ್ಪಳಿಸಲಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳಲಿರುವ ಚಂಡಮಾರುತ ಒಡಿಶಾ, ಮಹಾರಾಷ್ಟ್ರ ಹಾಗೂ ಗುಜರಾತ್​ನಲ್ಲಿ ಮೇ 23ರಿಂದ ಮೇ 28ರ ನಡುವೆ ಭಾರಿ ಮಳೆಯುಂಟು ಮಾಡಲಿದೆ.

ಮೇ 28ರಂದು ಗುಜರಾತ್ ಹಾಗೂ ಮುಂಬೈನಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಚಂಡಮಾರುತ ರೂಪುಗೊಳ್ಳುತ್ತಿದ್ದು ಪಶ್ಚಿಮಕ್ಕೆ ಚಲಿಸುವ ಮೊದಲು ಪೂರ್ವ ಕರಾವಳಿಯಲ್ಲಿ ಭೂಕುಸಿತವನ್ನುಂಟು ಮಾಡಬಹುದು. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಇತರ ರಾಜ್ಯಗಳಲ್ಲಿ ಮೇ 23 ರವರೆಗೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 7 ದಿನ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯಿಂದ ಕೂಡಿದ ಮಳೆಯಾಗಲಿದೆ. ತಮಿಳುನಾಡು, ಕರ್ನಾಟಕ, ಪುದುಚೇರಿ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮತ್ತು ಲಕ್ಷದ್ವೀಪಗಳಲ್ಲಿ ಮೇ 23 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಚದುರಿದ ಸಣ್ಣ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ, ಕೇರಳ ಮತ್ತು ಕರ್ನಾಟಕದಲ್ಲಿ ಮೇ 20 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೇ 20 ರಂದು ತಮಿಳುನಾಡು ಮತ್ತು ಕೇರಳಕ್ಕೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.

ಇಂದಿನಿಂದ ಕೇರಳದಲ್ಲೂ ಭಾರಿ ಮಳೆ ಸಾಧ್ಯತೆ ಇಂದಿನಿಂದ ವಿವಿಧ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.

ಮಲಪ್ಪುರಂ ಮತ್ತು ವಯನಾಡಿನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಎಂಟು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಇಡುಕ್ಕಿ, ಪಾಲಕ್ಕಾಡ್, ಕೋಳಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

RELATED ARTICLES
- Advertisment -
Google search engine

Most Popular