Monday, August 18, 2025
Google search engine

Homeಅಪರಾಧಸಿಲಿಂಡರ್ ಸ್ಪೋಟ : ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವು

ಸಿಲಿಂಡರ್ ಸ್ಪೋಟ : ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ನಗರದ ವಿಲ್ಸನ್ ಗಾರ್ಡನ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದನು. ಇಂದು ಗಾಯಗೊಂಡಿದ್ದಂತ ಮತ್ತೋರ್ವ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ನಿಗೂಢ ಸ್ಪೋಟ ಘಟನೆ ನಡೆದಿತ್ತು. ಆ ಬಳಿಕ ಪರಿಶೀಲಿಸಿದಾಗ ಸಿಲಿಂಡರ್ ಸ್ಪೋಟಗೊಂಡಿರುವುದಾಗಿ ತಿಳಿದು ಬಂದಿತ್ತು. ಈ ಘಟನೆಯಲ್ಲಿ ಬಾಲಕನೊಬ್ಬ ಸಾವನ್ನಪ್ಪಿದ್ದನು.

ಇನ್ನೂ ಈ ದುರಂತದಲ್ಲಿ ಗಾಯಗೊಂಡಿದ್ದಂತ 8 ವರ್ಷದ ಬಾಲಕಿ ಖಯಾಲಾಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಬಾಲಕಿ ಖಯಾಲಾ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ಸಿಲಿಂಡರ್ ಸ್ಪೋಟ ಘಟನೆಯಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

RELATED ARTICLES
- Advertisment -
Google search engine

Most Popular