ಮಂಗಳೂರು (ದಕ್ಷಿಣ ಕನ್ನಡ): ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಭೀಕರವಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡಿನ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ನಡೆದಿದೆ. ಚಿದಾನಂದ ( 50), ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ.
ಸ್ಕೂಟರ್ ಸವಾರ ಚಿದಾನಂದ ಅವರು ಬಿಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಕ್ರಾಸ್ ಮಾಡುವ ವೇಳೆ ಬಿಸಿರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.