Friday, August 1, 2025
Google search engine

Homeರಾಜ್ಯಸುದ್ದಿಜಾಲದ.ಕ. ಜಿಲ್ಲಾ ಫುಟ್ಬಾಲ್ ಸಂಸ್ಥೆ ಆಯೋಜನೆಯ 27ನೇ ಅಂತರ್ ಜಿಲ್ಲಾ ಮಟ್ಟದ ಫುಟ್ಬಾಲ್‌ ಪಂದ್ಯಾಟ ಆಗಸ್ಟ್...

ದ.ಕ. ಜಿಲ್ಲಾ ಫುಟ್ಬಾಲ್ ಸಂಸ್ಥೆ ಆಯೋಜನೆಯ 27ನೇ ಅಂತರ್ ಜಿಲ್ಲಾ ಮಟ್ಟದ ಫುಟ್ಬಾಲ್‌ ಪಂದ್ಯಾಟ ಆಗಸ್ಟ್ 4ರಿಂದ ಮಂಗಳೂರಿನಲ್ಲಿ ಆರಂಭ

ಮಂಗಳೂರು(ದಕ್ಷಿಣ ಕನ್ನಡ): ದ.ಕ. ಜಿಲ್ಲಾ ಪುಟ್ಬಾಲ್ ಸಂಸ್ಥೆ ಕಳೆದ 26 ವರ್ಷಗಳಿಂದ ಅಂತರ್ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜು, ಪದವಿ ಕಾಲೇಜಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಗಳಿಗಾಗಿ ಫುಟ್ಬಾಲ್‌ ಪಂದ್ಯಾಟ ನಡೆಸುತ್ತಾ ಬರುತ್ತಿದೆ. ಈ ಬಾರಿಯ 27ನೇ ವರ್ಷದ ಅಂತರ್ ಜಿಲ್ಲಾ ಮಟ್ಟದ ಫುಟ್ಬಾಲ್‌ ಪಂದ್ಯಾಟವು ಆಗಸ್ಟ್‌ 4ರ ಸೋಮವಾರದಿಂದ ಮಂಗಳೂರಿನ ವಿವಿಧ ಮೈದಾನಗಳಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಿ.ಎಂ. ಅಸ್ಲಾಂ ತಿಳಿಸಿದ್ದಾರೆ.

ಅವರು ಮಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರು ನೆಹರೂ ಮೈದಾನಕ್ಕೆ ಹೊಸ ಟರ್ಪ್ ಅಳವಡಿಸಿದ ನಂತರ ಈ ಪಂದ್ಯಾವಳಿಯನ್ನು ಆ ಮೈದಾನದಲ್ಲಿ ನಡೆಸಬೇಕೆಂದು ಬಯಕೆ ನಮ್ಮದಾಗಿತ್ತು. ಆದರೆ ಭಾರೀ ಮಳೆಯಿಂದಾಗಿ ಮೈದಾನದ ಕೆಲಸ ವಿಳಂಬವಾದ ಕಾರಣ ಈಗ ಈ ಪಂದ್ಯಾವಳಿ ಎರಡು ತಾಣಗಳಲ್ಲಿ ನಡೆಯಲಿದೆ. ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯ ಬಾಲಕರ ಹಾಗೂ ಬಾಲಕಿಯರ ಪಂದ್ಯವಾಳಿಗಳು ನಗರದ ಮಂಗಳಾ ಸ್ಟೇಡಿಯಂ ಪಕ್ಕದಲ್ಲಿರುವ ಕರಾವಳಿ ಉತ್ಸವ ಮೈದಾನದಲ್ಲಿ ನಡೆದರೆ, ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪಂದ್ಯಾಟ ನಗರದ ಹೊರಭಾಗದ ಮಂಜನಾಡಿ ಗ್ರಾಮದ ಕಿನ್ಯಾ ಎಂಬಲ್ಲಿರುವ ಯೇನೆಪೋಯ ಯುನಿವರ್ಸಿಟಿ ಕ್ಯಾಂಪಸ್ ಮೈದಾನದಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.

ಸುಮಾರು 200 ಕ್ಕೂ ಮಿಕ್ಕಿದ ಶಾಲಾ ಕಾಲೇಜು ತಂಡ ನೋಂದಾಯಿಸಿದ್ದು, 12 ದಿನಗಳ ಕಾಲ ಈ ಪಂದ್ಯಾಟ ನಡೆಯಲಿದೆ . ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆಯಂದು ಫೈನಲ್ ಪಂದ್ಯಾಟಗಳು ನಡೆಯಲಿದೆ‌. ಈಗಾಗಲೇ ಜಿಲ್ಲೆ ಹಾಗೂ ಹೊರ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಈ ಪುಟ್ಬಾಲ್ ಆಟದ ಕಾವು ಹೆಚ್ಚಿದ್ದು, ಮಂಗಳೂರಿನ ಹೊರ ಭಾಗದ ಹಲವು ಶಾಲಾ ಕಾಲೇಜುಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದೆ. ಸುಮಾರು 75 ವರ್ಷಗಳಿಂದ ಪುಟ್ಬಾಲ್ ಪಂದ್ಯಾಟ ನಡೆಸುತ್ತಾ ಬರುತ್ತಿರುವ ನಮ್ಮ ಸಂಸ್ಥೆ ಇಂಡಿಪೆಂಡೆನ್ಸ್ ಕಪ್ ಪಂದ್ಯಾವಳಿ ಆರಂಭಿಸಿದ ನಂತರದಲ್ಲಿ ಹಲವಾರು ಆಟಗಾರರು ರಾಷ್ಟ್ರ, ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ. ಅದರಲ್ಲೂ ಹಲವು ಬಾಲಕಿಯರು ರಾಜ್ಯ ತಂಡವನ್ನು ಪ್ರತಿನಿಧಿಸಿ ಆಟವಾಡಿದ್ದಾರೆ ಎಂದರು.

RELATED ARTICLES
- Advertisment -
Google search engine

Most Popular