ಚಾಮರಾಜನಗರ: ಪಶುಸಂಗೋಪನೆ, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಡಿಸೆಂಬರ್ 22 ಮತ್ತು 23 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಡಿಸೆಂಬರ್ 22 ರಂದು ಬೆಳಿಗ್ಗೆ 10.30 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸುವರು. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬರ ವಿಪತ್ತು ನಿರ್ವಹಣಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಹನೂರಿಗೆ ಆಗಮಿಸುವರು. ಹನೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬರ ವಿಪತ್ತು ನಿರ್ವಹಣಾ ಸಭೆ ನಡೆಸುವರು.
ರಾತ್ರಿ 7 ಗಂಟೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು. ಡಿಸೆಂಬರ್ 23 ರಂದು ಮಧ್ಯಾಹ್ನ 3 ಗಂಟೆಗೆ ಗುಂಡ್ಲುಪೇಟೆಗೆ ಆಗಮಿಸುವರು. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬರ ವಿಪತ್ತು ನಿರ್ವಹಣಾ ಸಭೆ ನಡೆಸುವರು. ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.