Thursday, June 26, 2025
Google search engine

Homeಅಪರಾಧದಕ್ಷಿಣ ಕನ್ನಡ: ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ದಕ್ಷಿಣ ಕನ್ನಡ: ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ದಕ್ಷಿಣ ಕನ್ನಡ: ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಡ್ಯಾಂ ಬಳಿಯ ನೇತ್ರಾವತಿ ನದಿಯಲ್ಲಿ ನಡೆದಿದೆ.

ಅಡ್ಯಾರ್ ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತ ರ್ದುದೈವಿಗಳು.

ಇಬ್ಬರ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಗುರುವಾರವಷ್ಟೇ ಮಗುವಿನ ಹುಟ್ಟುಹಬ್ಬ ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದ ಚೈತ್ರ. ನಿನ್ನೆ (ಮಾ.29) ಮಧ್ಯಾಹ್ನದ ವೇಳೆ ತಾಯಿ-ಮಗು ನಾಪತ್ತೆಯಾಗಿದ್ದರು. ಈ ಹಿನ್ನಲೆ ಸಂಬಂಧಿಕರು, ಸಾಮಾಜಿಕ ಜಾಲತಾಣದ ಮೂಲಕ ಹುಡುಕಾಟಕ್ಕೆ ಮನವಿ ಮಾಡಿದ್ದರು.

ಇದೀಗ ಮೃತದೇಹ ಪತ್ತೆಯಾಗಿದ್ದು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

RELATED ARTICLES
- Advertisment -
Google search engine

Most Popular