ತುಮಕೂರು: ತುಂಗಭದ್ರಾ ಡ್ಯಾಂ ಗೇಟ್ ಮುರಿದಿರೋದು ಸರ್ಕಾರಕ್ಕೊಂದು ಅಪಶಕುನದ ಮುನ್ಸೂಚನೆ ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸರಿ ಇಲ್ಲ. ರಾಜ್ಯದ ಆಡಳಿತ ಸರಿಯಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ .ಸರ್ಕಾರ ಮೊದಲು ನೀರಾವರಿ ಸಚಿವರನ್ನು ನೇಮಕ ಮಾಡಬೇಕು. ಅವರು ಆಡಳಿತಕ್ಕಿಂತ ಹೆಚ್ಚು ರಾಜಕಾರಣಕ್ಕೆ ಹೆಚ್ಚು ಒತ್ತು ಕೊಡುವ ಸ್ಥಿತಿಯಲ್ಲಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಅವರು ಚುನಾವಣೆಗೆ ಹೆಚ್ಚು ಒತ್ತು ಕೊಡಬೇಕಾಗಿದೆ. ಹೀಗಾಗಿ ನೀರಾವರಿ ಇಲಾಖೆ ಅನಾಥವಾಗಿದೆ ಎಂದು ಗೋವಿಂದ ಕಾರಜೋಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ರೈತರು ಕಣ್ಣೀರು ಹಾಕುವಂತಹ ಪರಿಸ್ಥಿತಿ ಈಗ ಬಂದಿದೆ. ಸರಿಯಾಗಿ ನಿಭಾಯಿಸದೇ ಇರೋದೇ ಗೇಟ್ ಮುರಿಯೋದಕ್ಕೆ ಮೂಲ ಕಾರಣವಾಗಿದೆ ಎಂದು ನುಡಿದರು.