ದಾಂಡೇಲಿ: ಹಳಿಯಾಳ- ದಾಂಡೇಲಿ ರಾಜ್ಯ ಹೆದ್ದಾರಿಯ ಕೇರವಾಡದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಡಿ.23ರ ಶನಿವಾರ ನಡೆದಿದೆ.
ಪೂನದಿಂದ ದಾಂಡೇಲಿ ಮತ್ತು ಜೋಯಿಡಾಕ್ಕೆ ಪ್ರವಾಸಕ್ಕೆಂದು ಕುಟುಂಬ ಸಮೇತರಾಗಿ ಬಂದಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರವಾಡದ ಬಳಿ ಪಲ್ಟಿಯಾಗಿದೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.