Monday, November 3, 2025
Google search engine

Homeಸಿನಿಮಾಅ.31ರಂದು ಡಾರ್ಲಿಂಗ್ ಕೃಷ್ಣ ಅಭಿನಯದ ʼಬ್ರ್ಯಾಟ್ʼ ಚಿತ್ರ ತೆರೆಗೆ

ಅ.31ರಂದು ಡಾರ್ಲಿಂಗ್ ಕೃಷ್ಣ ಅಭಿನಯದ ʼಬ್ರ್ಯಾಟ್ʼ ಚಿತ್ರ ತೆರೆಗೆ

ಬೆಂಗಳೂರು : ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ , ಡಾಲ್ಫಿನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ನಿರ್ದೇಶನದ ಬಹುನಿರೀಕ್ಷಿತ ʼಬ್ರ್ಯಾಟ್ʼ ಚಿತ್ರ ಈ ವಾರ ಅಂದರೆ ಅ. 31 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಯಶಸ್ವಿʼಕೌಸಲ್ಯ ಸುಪ್ರಜಾ ರಾಮʼ ಚಿತ್ರದ ನಂತರ ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ ʼಬ್ರ್ಯಾಟ್ʼ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಜನರ ಮನ ಗೆದ್ದಿದೆ. ಟೀಸರ್ ಹಾಗೂ ಟ್ರೇಲರ್ಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ಕೃಷ್ಣ ಅವರ ಲುಕ್ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರದಲ್ಲಿದ್ದಾರೆ.

ʼಫಸ್ಟ್ ರ್ಯಾಂಕ್ ರಾಜುʼ ಚಿತ್ರದ ನಂತರ ಮಂಜುನಾಥ್ ವಿ. ಕಂದಕೂರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ಮನಿಶಾ ಕಂದಕೂರ್ ನಟಿಸಿದ್ದಾರೆ. ಚಿತ್ರದ ತಾರಾಬಳಗದಲ್ಲಿಅಚ್ಯುತಕುಮಾರ್, ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ಇದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅಭಿಲಾಶ್ ಕಲ್ಲತ್ತಿ ಛಾಯಾಗ್ರಹಣ, ಗಿರಿ ಮಹೇಶ್ ಸಂಕಲನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನ ʼಬ್ರ್ಯಾಟ್ʼ ಚಿತ್ರಕ್ಕಿದೆ.

RELATED ARTICLES
- Advertisment -
Google search engine

Most Popular