ಬೆಂಗಳೂರು : ವಿ.ಲವ ನಿರ್ದೇಶನದ ‘ಬಾಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು ಆದರೆ ಈ ಸಿನಿಮಾವನ್ನ ರೇಣುಕಾ ಕೊಲೆ ಕೇಸ್ ಆಧರಿಸಿ ಸಿನಿಮಾ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಬಾಸ್’ ಸಿನಿಮಾ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ನೈಜ ಘಟನೆಗಳನ್ನು ಆಧರಿಸಿ ‘ಬಾಸ್’ ಸಿನಿಮಾ ಸಿದ್ಧವಾಗಿದೆ ಎಂಬುದನ್ನು ಟೀಸರ್ ನಲ್ಲಿ ಉಲ್ಲೇಖಿಸಲಾಗಿತ್ತು. ಟೀಸರ್ ನೋಡಿದರೆ ನಟ ದರ್ಶನ್ ಕೇಸ್ ರೀತಿಯೇ ಈ ಸಿನಿಮಾದ ಕಥೆ ಇದೆ ಎಂಬ ಅನುಮಾನ ಮೂಡುತ್ತಿದೆ ಎಂಬ ಆರೋಪವಿದ್ದು ಈ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರು ‘ಬಾಸ್’ ಸಿನಿಮಾ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಮೊದಲು ಸೆಷನ್ಸ್ ಕೋರ್ಟ್ನಲ್ಲಿ ವಿಜಯಲಕ್ಷ್ಮಿ ದರ್ಶನ್ ಅವರು ‘ಬಾಸ್’ ಸಿನಿಮಾಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅಲ್ಲಿ ಅವರ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಜೂನ್ 19ರಂದು ‘ಬಾಸ್’ ಸಿನಿಮಾ ಬಿಡುಗಡೆ ಆಗಬೇಕಿದೆ. ಈಗಾಗಲೇ ಚಿತ್ರತಂಡದವರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು. ಜೂನ್ 19ರಂದು ಸಿನಿಮಾ ರಿಲೀಸ್ ಎಂದು ಮಾಧ್ಯಮಗಳಲ್ಲಿ ಜಾಹೀರಾತು ಕೂಡ ನೀಡಲಾಗಿದೆ. ಆದರೆ ಚಿತ್ರದ ಬಿಡುಗಡೆಗೆ ಕೆಲವೇ ದಿನ ಬಾಕಿ ಇರುವಾಗ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.



