ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಆಗಿರುವ ದರ್ಶನ್ ಇದೀಗ ಅವರ ಪರ ವಕೀಲರಿಂದ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟಿಗೆ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಸೇಷನ್ಸ್ ಕೋರ್ಟಿಗೆ ನಟ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚಿಗೆ ನಟ ದರ್ಶನ್ ಅವರನ್ನು ನೋಡಲು ತಾಯಿ ಮೀನಾ ತೂಗುದೀಪ್, ಅಕ್ಕ ಹಾಗೂ ಭಾವ, ಸೋದರ ಅಳಿಯ ಜೈಲಿಗೆ ಭೇಟಿ ನೀಡಿದ್ದರು. ಅಲ್ಲದೆ ಪತ್ನಿ ವಿಜಯಲಕ್ಷ್ಮಿ ಕೂಡ ಭೇಟಿ ನೀಡಿ ಕಾನೂನು ಹೋರಾಟದ ಕುರಿತು ಚರ್ಚಿಸಿದ್ದರು. ಇದೀಗ ನಟ ದರ್ಶನ್ ಅವರು ಜಾಮೀನು ಕೋರಿ ಬೆಂಗಳೂರಿನ ಸೆಕ್ಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.