ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯಕ್ಕೆ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿ ಇದ್ದಾರೆ. ನಟ ದರ್ಶನ್ ಗೆ ಜೈಲಿನಲ್ಲಿ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ನೀಡುವಂತೆ ಅರ್ಜಿ ಸಲ್ಲಿಸಿದ್ದು, ಈ ಕುರಿತು ಇಂದು ಕೋರ್ಟ್ ನಲ್ಲಿ ನಟ ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ.
ಇಂದು ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ನಲ್ಲಿ ನಟ ದರ್ಶನ್ ಪರ ವಕೀಲರಿಂದ ಕೋರ್ಟ್ ಆದೇಶ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ನೀಡದೆ, ಜೈಲಾಧಿಕಾರಿಗಳು ಕೋಟ್ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ದರ್ಶನ್ ಪರ ವಕೀಲರು ಈ ಹಿಂದಿನ ವಿಚಾರಣೆಯಲ್ಲಿ ವಾದಿಸಿದ್ದರು. ಇದೀಗ ದರ್ಶನ್ ಭವಿಷ್ಯ ಇಂದು ಕೋರ್ಟ್ ನಲ್ಲಿ ನಿರ್ಧಾರವಾಗಲಿದೆ ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ಒದಗಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ.