Tuesday, May 20, 2025
Google search engine

Homeರಾಜ್ಯಸುದ್ದಿಜಾಲವಿಶ್ವಮಾನವ ದಿನ ಅರ್ಥಪೂರ್ಣ ಆಚರಣೆಗೆ ನಿರ್ಧಾರ: ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ

ವಿಶ್ವಮಾನವ ದಿನ ಅರ್ಥಪೂರ್ಣ ಆಚರಣೆಗೆ ನಿರ್ಧಾರ: ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ

ಚಾಮರಾಜನಗರ: ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನವಾದ ಡಿಸೆಂಬರ್ 29ಅನ್ನು ವಿಶ್ವಮಾನವ ದಿನವನ್ನಾಗಿ ಆಚರಿಸಲಿದ್ದು ಈ ಕಾರ್ಯಕ್ರಮವನ್ನು ಜಿಲ್ಲಾಡಳಿತದ ವತಿಯಿಂದ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶ್ವಮಾನವ ದಿನ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಸಕಲ ಸಿದ್ದತೆಗಳೊಂದಿಗೆ ಆಯೋಜಿಸಲು ತೀರ್ಮಾನಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮಾತನಾಡಿ ಕುವೆಂಪು ಅವರು ಮನುಜ ಮತ ವಿಶ್ವಪಥ ಎಂಬ ಮಹತ್ತರ ಸಂದೇಶ ಸಾರಿದ ವಿಶ್ವಮಾನವರಾಗಿದ್ದಾರೆ. ಕುವೆಂಪು ಅವರು ಮನುಕುಲಕ್ಕೆ ನೀಡಿದ ಮಾರ್ಗದರ್ಶನ ಆದರ್ಶಗಳನ್ನು ತಿಳಿಸಬೇಕಿದೆ. ಈ ನಿಟ್ಟಿನಲ್ಲಿ ಕುವೆಂಪು ಅವರ ಜನ್ಮದಿನದಂದು ವಿಶ್ವಮಾನವ ದಿನವನ್ನು ಆಚರಿಸುತ್ತಿದ್ದು, ಈ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಬೇಕಿದೆ ಎಂದರು. ಕಾರ್ಯಕ್ರಮವನ್ನು ನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗುವುದು. ಅರ್ಥಪೂರ್ಣವಾಗಿ ಕಾರ್ಯಕ್ರಮ ಏರ್ಪಾಡು ಮಾಡಲು ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗುತ್ತದೆ. ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕುವೆಂಪು ಅವರ ವಿಚಾರಧಾರೆಗಳನ್ನು ತಿಳಿಸಲು ಕಾರ್ಯಕ್ರಮದಲ್ಲಿ ಉಪನ್ಯಾಸ ಏರ್ಪಡಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತಿಳಿಸಿದರು.

ಸಭೆಯಲ್ಲಿ ಹಾಜರಿದ್ದ ಮುಖಂಡರು ಮಾತನಾಡಿ ಕುವೆಂಪು ಅವರ ವಿಚಾರಧಾರೆಗಳನ್ನು ವಿದ್ಯಾರ್ಥಿಗಳಿಗೆ ಹೆಚ್ಚು ಮನವರಿಕೆ ಮಾಡಿಕೊಡಬೇಕಿದೆ. ಈ ನಿಟ್ಟಿನಲ್ಲಿ ಕುವೆಂಪು ಅವರ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ನಡೆಸಬೇಕು. ಅತ್ಯುತ್ತಮ ಪ್ರಬಂಧಗಳಿಗೆ ಬಹುಮಾನ ನೀಡಿ ಗೌರವಿಸಬೇಕು. ವಿಶಿಷ್ಟ ಕಾರ್ಯಕ್ರಮಗಳ ಮೂಲಕ ವಿಶ್ವಮಾನವ ದಿನವನ್ನು ಆಯೋಜಿಸಬೇಕು ಎಂಬುದು ಸೇರಿದಂತೆ ಕಾರ್ಯಕ್ರಮ ಸಂಬಂಧ ಇತರೆ ಸಲಹೆಗಳನ್ನು ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಡಿಸೆÉಂಬರ್ 29ರಂದು ಬೆಳಿಗ್ಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿ ಅತ್ಯುತ್ತಮ ಪ್ರಬಂಧ ಆಯ್ಕೆ ಮಾಡಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲು ಕ್ರಮ ವಹಿಸಬೇಕೆಂದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎನ್. ಗುರುಲಿಂಗಯ್ಯ, ವಿವಿಧ ಸಂಘಟನೆಗಳ ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ವಿ.ಮಲ್ಲಿಕಾರ್ಜುನಸ್ವಾಮಿ, ಸೋಮಶೇಖರ ಬಿಸಲ್ವಾಡಿ, ಸಿ.ಎಂ. ನರಸಿಂಹಮೂರ್ತಿ, ಗು. ಪುರುಷೋತ್ತಮ್, ಜಿ. ಬಂಗಾರು, ಪಣ್ಯದಹುಂಡಿ ರಾಜು, ಪಿ. ಸ್ವಾಮಿ, ಚಿನ್ನಮುತ್ತು ಕರಿಯನಕಟ್ಟೆ, ಮಹೇಶ್ ಗೌಡ, ಎಂ.ಎನ್. ಮಹದೇವ, ಆರ್. ಶಿವಣ್ಣ, ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular