Thursday, August 21, 2025
Google search engine

Homeಅಪರಾಧಕಾನೂನುಅವಹೇಳನ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ

ಅವಹೇಳನ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ: ಉಡುಪಿಯ ಬ್ರಹ್ಮಾವರ ಕೋರ್ಟ್ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ಬ್ರಹ್ಮಾವರ ಪೊಲೀಸರು ಅ.21ರಂದು ಉಜಿರೆಯಲ್ಲಿರುವ ತಿಮರೋಡಿಯವರ ನಿವಾಸಕ್ಕೆ ತೆರಳಿ ಅವರನ್ನು ಬಂಧಿಸಿದರು.

ಬಂಧನದ ನಂತರ ವೈದ್ಯಕೀಯ ತಪಾಸಣೆ ನಡೆಸಿ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಯಿತು. ಈ ವೇಳೆ, ತಿಮರೋಡಿಯ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದರೂ, ಕೋರ್ಟ್ ಅದನ್ನು ನಿರಾಕರಿಸಿ, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಮುಂದಿನ ವಿಚಾರಣೆ ಆಗಸ್ಟ್ 23ರಂದು ನಡೆಯಲಿದೆ.

ತಿಮರೋಡಿ ವಕೀಲ ವಿಜಯವಾಸು ಪೂಜಾರಿ ಮಾಧ್ಯಮದೊಂದಿಗೆ ಮಾತನಾಡಿ, ತಿಮರೋಡಿಯವರು ಹೈ ಬಿಪಿಯಿಂದ ಬಳಲುತ್ತಿದ್ದು, ಅವರಿಗೆ ಮಾತ್ರೆ ನೀಡಲಾಗಿದೆ ಎಂದು ತಿಳಿಸಿದರು. ಪ್ರಕರಣದಲ್ಲಿ ಜಾಮೀನು ರಹಿತ ಸೆಕ್ಷನ್ಗಳನ್ನು ಬಳಸಿರುವುದರಿಂದ ತಕ್ಷಣ ಜಾಮೀನು ಸಾಧ್ಯವಾಗಿಲ್ಲ. ಆದರೆ, ಸೋಮವಾರ ನಡೆಯಲಿರುವ ವಿಚಾರಣೆಯಲ್ಲಿ ಜಾಮೀನು ಸಿಗುವ ಸಾಧ್ಯತೆ ಹೆಚ್ಚು ಎಂದು ಹೇಳಿದರು.

ಈ ಮಧ್ಯೆ, ತಿಮರೋಡಿ ಅವರನ್ನು ಹಿರಿಯಡ್ಕ ಸಬ್ ಜೈಲಿಗೆ ಕಳುಹಿಸಲಾಗಿದೆ.

RELATED ARTICLES
- Advertisment -
Google search engine

Most Popular