ನವದೆಹಲಿ:ನಿನ್ನೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು ಕಂಡ ಬೆನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು (ಏಪ್ರಿಲ್ 18, ಶನಿವಾರ)ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಈ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಏನು ಮಾತನಾಡುತ್ತಾರೆ ಎಂಬ ಬಗ್ಗೆ ಇನ್ನೂ ಯಾವುದೇ ಖಚಿತ ಮಾಹಿತಿ ಇಲ್ಲ.ಕೇಂದ್ರ ಸರ್ಕಾರದ ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ವಿಫಲವಾಗಿದೆ. ಹೀಗಾಗಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೊಳಗಾಗಿದೆ. ಇದಾದ ಒಂದು ದಿನದ ನಂತರ ಮೋದಿ ಭಾಷಣ ಮಾಡುತ್ತಿರುವುದು, ಹೆಚ್ಚು ಮಹತ್ವ ಪಡೆದುಕೊಂಡಿದೆ.
ಲೋಕಸಭೆಯ ಸ್ಥಾನಗಳನ್ನು 543ರಿಂದ 850ಕ್ಕೆ ಏರಿಸುಗವ ಸಂವಿಧಾನ ತಿದ್ದುಪಡಿ ಮಸೂದೆ ಮತ್ತು ಮಹಿಳಾ ಮೀಸಲಾತಿ ಮಸೂದೆ ಪಾಸಾಗಲು ಮೂರನೇ ಎರಡರಷ್ಟು ಮತಗಳು ಬೇಕಿತ್ತು. ಎನ್ ಡಿಎ ಸರ್ಕಾರದ ಈ ಎರಡೂ ಮಹತ್ವಾಕಾಂಕ್ಷಿಯ ಮಸೂದೆಗಳನ್ನು ಇಂಡಿಯಾ ಮೈತ್ರಿಕೂಟ ಸೋಲಿಸಿದೆ. ಸಧ್ಯ ಪ್ರಧಾನಿ ನರೇಂದ್ರ ಮೋದಿ ಯಾವುದರ ಬಗ್ಗೆ ಮಾತನಾಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಮೂಡಿದೆ.



