Friday, May 29, 2026
Google search engine

Homeರಾಜಕೀಯಮಾದಿಗ ಸಮುದಾಯಕ್ಕೆ ಸಚಿವ ಮಂಡಲದಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡಲು ಆಗ್ರಹ

ಮಾದಿಗ ಸಮುದಾಯಕ್ಕೆ ಸಚಿವ ಮಂಡಲದಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡಲು ಆಗ್ರಹ

ಬೆಂಗಳೂರು : ರಾಜ್ಯದ ಅತಿ ದೊಡ್ಡ ಮಾದಿಗ ಸಮುದಾಯಕ್ಕೆ ಸಚಿವ ಮಂಡಲದಲ್ಲಿ ಹೆಚ್ಚು ಬಲಿಷ್ಠ ಹಾಗೂ ನ್ಯಾಯಸಮ್ಮತ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಕರ್ನಾಟಕ ರಾಜ್ಯ ಯುವ ಸಮೂಹದ ರಾಜ್ಯಾಧ್ಯಕ್ಷ ಡಾ.ಎಸ್.ಸಂಗಮೇಶ್ ಒತ್ತಾಯಿಸಿದ್ದಾರೆ.

ಆರ್‌.ಬಿ.ತಿಮ್ಮಾಪುರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಜೊತೆಗೆ ಕೆ.ಎಚ್.ಮುನಿಯಪ್ಪ ಅವರೊಂದಿಗೆ ಹೆಚ್.ಆಂಜನೇಯ ಅವರಿಗೆ ಸಚಿವ ಸ್ಥಾನ ಕಲ್ಪಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದ ಎಲ್ಲಾ ಮಾದಿಗ ಸಂಘಟನೆಗಳು, ಮಠಾಧೀಶರು, ಬುದ್ಧಿಜೀವಿಗಳು, ಯುವ ಸಂಘಟನೆಗಳು, ನಿವೃತ್ತ ಅಧಿಕಾರಿಗಳು ಹಾಗೂ ಪ್ರಗತಿಪರ ಶಕ್ತಿಗಳು ಒಂದೇ ವೇದಿಕೆಯಲ್ಲಿ ನಿಂತು ಈ ನ್ಯಾಯಸಮ್ಮತ ಪ್ರಾತಿನಿಧ್ಯದ ಬೇಡಿಕೆಗೆ ಬೆಂಬಲ ಸೂಚಿಸಬೇಕೆಂದು ಮನವಿ ಮಾಡಿದ್ದಾರೆ.

ಮಾದಿಗ ಸಮುದಾಯವು ರಾಜ್ಯದ ಅತಿ ದೊಡ್ಡ ದಲಿತ ಸಮುದಾಯವಾಗಿದ್ದು, ಸಾಮಾಜಿಕ ನ್ಯಾಯ, ಜನಪರ ಹೋರಾಟಗಳು ಹಾಗೂ ಕಾಂಗ್ರೆಸ್ ಪಕ್ಷದ ಬಲವರ್ಧನೆಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಆದರೂ ಸಮುದಾಯಕ್ಕೆ ಸರ್ಕಾರದಲ್ಲಿ ತಕ್ಕ ಮಟ್ಟಿನ ರಾಜಕೀಯ ಸ್ಥಾನಮಾನ ಸಿಗದಿರುವುದು ನೋವು ತಂದಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ ಸಮುದಾಯದ ಜನಸಂಖ್ಯೆ, ರಾಜಕೀಯ ಶಕ್ತಿ ಹಾಗೂ ಸಾಮಾಜಿಕ ಕೊಡುಗೆಯನ್ನು ಪರಿಗಣಿಸಿದರೆ ಸಮರ್ಪಕ ಪ್ರಾತಿನಿಧ್ಯ ದೊರಕಿಲ್ಲ. ರಾಜಕೀಯ ಪ್ರಾತಿನಿಧ್ಯವೆಂದರೆ ಕೇವಲ ಹುದ್ದೆಯ ವಿಷಯವಲ್ಲ ಅದು ಸಮುದಾಯದ ಗೌರವ, ಹಕ್ಕು ಹಾಗೂ ಆಡಳಿತದಲ್ಲಿ ಪಾಲುದಾರಿಕೆಯ ಸಂಕೇತವಾಗಿದೆ. ಆದ್ದರಿಂದ ಸಮುದಾಯದ ಭಾವನೆಗಳಿಗೆ ಗೌರವ ನೀಡಿ ತಕ್ಷಣ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

RELATED ARTICLES
- Advertisment -
Google search engine

Most Popular