ವರದಿ :ಸ್ಟೀಫನ್ ಜೇಮ್ಸ್
ಬೆಳಗಾವಿ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಮಠಾಧೀಶರ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಕನ್ನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಬೆಳಗಾವಿ ಜಿಲ್ಲಾ ಪ್ರವೇಶ ರ್ನಿಬಂಧಿಸುವಂತೆ ಬಸವಪರ ಸಂಟನೆಗಳು ಆಗ್ರಹಿಸಿವೆ.. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ವಿವಿಧ ಬಸವಪರ ಸಂಟನೆಗಳ ಪ್ರಮುಖರು ಮತ್ತು ಪದಾಧಿಕಾರಿಗಳು ಕನ್ನೇರಿ ಮಠದ ಸ್ವಾಮೀಜಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರ ಬಸವಣ್ಣ ಅವರನ್ನು ಸಾಂಸತಿಕ ನಾಯಕ ಎಂದು ಷಿಸಿದ ವರ್ಷಾಚರಣೆ ಪ್ರಯುಕ್ತ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ರಾಜ್ಯಾದ್ಯಂತ ಆಯೋಜಿಸಲಾದ ಬಸವ ಸಂಸತಿ ಅಭಿಯಾನ ಅತ್ಯಂತ ಯಶಸ್ವಿಯಾಗಿದೆ. ಇಂಥ ಅಭಿಯಾನ ಮುಖ್ಯಮಂತ್ರಿಗಳ ಕೃಪಾಪೋಷಿತ ಕಲಾವಿದರಿಂದ ಕೂಡಿದ ನಾಟಕ ಎಂದು ಅವಹೇಳನ ಮಾಡುತ್ತ ಅವಾಚ್ಯ ಪದ ಬಳಸಿ ಕಣ್ಣೀರಿ ಸ್ವಾಮೀಜಿ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಣ್ಣೀರಿ ಶ್ರೀಗಳ ಹೇಳಿಕೆ ಧಾರ್ಮಿಕ ಅಸಹಿಷ್ಣುತೆ, ಸಾರ್ವಜನಿಕರಲ್ಲಿ ಗೊಂದಲ ಹಾಗೂ ಸಾರ್ವಜನಿಕ ಶಾಂತಿ ಕದಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಿದೆ. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಬೆಳಗಾವಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿಗಳು ಪ್ರತಿಬಂಧಕಾಜ್ಞೆ ಹೊರಡಿಸಬೇಕು ಎಂದು ಒತ್ತಾಯಿಸಿದರು.
ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ, ಮಹಿಳಾ ಟಕದ ಅಧ್ಯಕ್ಷೆ ಪ್ರೇಮಕ್ಕ ಅಂಗಡಿ, ಲಿಂಗಾಯತ ಸಂಟನೆ ಅಧ್ಯಕ್ಷ ಈರಣ್ಣ ದಯಣ್ಣವರ, ಲಿಂಗಾಯತ ಕ್ಷೇಮಾಭಿವೃದ್ಧಿ ಸಂದ ಎಸ್.ಜಿ.ಸಿದ್ದಾಳ, ರಾಷ್ಟ್ರೀಯ ಬಸವದಳ ಅಧ್ಯಕ್ಷ ಅಶೋಕ ಬೆಂಡಿಗೇರಿ, ಎಂ.ಎಂ.ಬಾಳಿ, ಸಿ.ಎಂ.ಬೂದಿಹಾಳ, ಶಂಕರ ಗುಡಸ, ಈರಣ್ಣ ಚಿನಗುಡಿ ಇತರರಿದ್ದರು.



                                    