Tuesday, July 8, 2025
Google search engine

Homeರಾಜ್ಯಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಸೋಮವಾರ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ಗಳು ಹರಿದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ, ಪೀಣ್ಯ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ನೀಡಿದೆ.

ಸಿದ್ದರಾಮಯ್ಯನವರ ಆರೋಗ್ಯ ಸಂಬಂಧಿಸಿದ ಖಾಸಗಿ ವಾಹಿನಿಯ ಸುದ್ದಿಯ ಕುರಿತ ಫೇಸ್‌ಬುಕ್ ಪೋಸ್ಟ್ಗೆ, ಕೆಲವರು ಸಿಎಂ ಸಾವಿನ ಕುರಿತ ಅಪಪ್ರಚಾರ, ಅಶ್ಲೀಲ ಭಾಷೆಯ ನಿಂದನೆ ಮತ್ತು ದಿಕ್ಕು ತಪ್ಪಿಸುವ ಕಮೆಂಟ್‌ಗಳನ್ನು ಮಾಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ನ ಕುಶಾಲ್ ಹರುವೇಗೌಡ ಹಾಗೂ ಸಂಜಯ್ ಎಂಬವರು ದೂರು ನೀಡಿದ್ದಾರೆ.

ಅಂತಹ ವಿಕೃತ ಮನಸ್ಸಿನ ವ್ಯಕ್ತಿಗಳ ಹೇಳಿಕೆಗಳು ರಾಜ್ಯದ ಜನತೆಗೆ, ಅಭಿಮಾನಿಗಳಿಗೆ ಮತ್ತು ಕಾರ್ಯಕರ್ತರಿಗೆ ನೋವು ಉಂಟಾಗಿರುತ್ತದೆ. ಶಾಂತಿಯ ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಆತಂಕವಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಂಬಂಧಿತ ಪೋಸ್ಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನೂ ಲಗತ್ತಿಸಲಾಗಿದೆ.

RELATED ARTICLES
- Advertisment -
Google search engine

Most Popular