Friday, December 12, 2025
Google search engine

Homeರಾಜಕೀಯಮೋದಿ ವಿರುದ್ಧ ಅವಹೇಳನಕಾರಿ ವಿಡಿಯೋ : ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ಮೋದಿ ವಿರುದ್ಧ ಅವಹೇಳನಕಾರಿ ವಿಡಿಯೋ : ಕಠಿಣ ಕ್ರಮಕ್ಕೆ ಯದುವೀರ್‌ ಆಗ್ರಹ

ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸೂಚನೆ ನೀಡಿದ್ದಾರೆ.

ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವ ವೀಡಿಯೋಗಳನ್ನು ಹರಿಯಬಿಟ್ಟಿರುವ ಫಾಹಾದ್‌, ಬಾಸಿಲ್‌, ಸಮೀರ್‌ರನ್ನು ಪೊಲೀಸರು ಬಂಧಿಸಿದ್ದು, ಇಷ್ಟಲ್ಲದೆ ಅವರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಯದುವೀರ್‌ ಆಗ್ರಹಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಸದರು, ಇತ್ತೀಚೆಗೆ ಇಂಥವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರಿಗೆ ತಕ್ಕ ಪಾಠ ಕಲಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗ ಬಂಧಿತರಾಗಿರುವವರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸ್‌‍ ಅಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿದ್ದು, ಈ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಜಾರಿಯಾದರೆ ಮುಂದೆ ಇಂಥ ಅಪರಾಧ ಎಸಗಲು ಭೀತಿ ಉಂಟಾಗಬೇಕು. ಕಠಿಣ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ವಿವರಿಸಿದ್ದಾರೆ. ಅಲ್ಲದೇ ದೇಶದ ಪ್ರಧಾನಮಂತ್ರಿಯನ್ನು ನಿಂದಿಸಿರುವವರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕು ಎಂದು ಆಗ್ರಹಿಸಿ ನಾಳೆಯಿಂದ ಬಿಜೆಪಿಯಿಂದ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular