Monday, January 19, 2026
Google search engine

Homeಅಪರಾಧಡಿಜಿಪಿ ರಾಮಚಂದ್ರ ರಾವ್‌ ಪ್ರಕರಣ: ಸರ್ಕಾರದ ಕ್ರಮವೇನು?

ಡಿಜಿಪಿ ರಾಮಚಂದ್ರ ರಾವ್‌ ಪ್ರಕರಣ: ಸರ್ಕಾರದ ಕ್ರಮವೇನು?

ಬೆಂಗಳೂರು: ಕಚೇರಿಯಲ್ಲಿರುವಾಗಲೇ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ವಿಡಿಯೋ ಈಗ ವೈರಲ್‌ ಆಗಿದೆ.

ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಬ್ಬಿಕೊಂಡಿದ್ದಾರೆ. 4-5 ತಿಂಗಳಲ್ಲಿ ರಾಮಚಂದ್ರ ರಾವ್‌ ಪೊಲೀಸ್‌ ಇಲಾಖೆಯಿಂದ ನಿವೃತ್ತರಾಗಲಿದ್ದರು. ನಿವೃತ್ತರಾಗುವ ಸಮಯದಲ್ಲೇ ಅವರು ರಹಸ್ಯ ಕ್ಯಾಮೆರಾದ ಮುಂದೆ ಬೆತ್ತಲಾಗಿದ್ದಾರೆ.

ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಬಿಡುಗಡೆ ಆಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಸರ್ಕಾರ ಯಾವ ರೀತಿಯ ಕ್ರಮವನ್ನು ಕೈಗೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ಈ ಹಿಂದೆ ಚಿನ್ನ ಕಳ್ಳ ಸಾಗಾಣಿಕೆಯ ಪ್ರಕರಣದಲ್ಲಿ ಪುತ್ರಿ ರನ್ಯ ರಾವ್‌ಗೆ ಶಿಷ್ಟಾಚಾರ ಉಲ್ಲಂಘಿಸಿ ವಿಮಾನ ನಿಲ್ದಾಣದಲ್ಲಿ ವಿಐಪಿ ಟ್ರೀಟ್‌ಮೆಂಟ್‌ ನೀಡಿದ್ದಕ್ಕೆ ಸುದ್ದಿಯಾಗಿದ್ದರು.

RELATED ARTICLES
- Advertisment -
Google search engine

Most Popular