Wednesday, July 23, 2025
Google search engine

Homeರಾಜ್ಯಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ – ಎಸ್ಐಟಿಗೆ ಇನ್ನೂ 20 ಅಧಿಕಾರಿಗಳ ನೇಮಕ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ – ಎಸ್ಐಟಿಗೆ ಇನ್ನೂ 20 ಅಧಿಕಾರಿಗಳ ನೇಮಕ

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದ್ದು, ಇದೀಗ ಆ ತಂಡಕ್ಕೆ ಹೆಚ್ಚುವರಿಯಾಗಿ 20 ಹಿರಿಯ ಅಧಿಕಾರಿಗಳನ್ನು ನೇಮಿಸಿ ಕರ್ನಾಟಕ ರಾಜ್ಯ ಡಿಜಿಪಿ ಆದೇಶ ಹೊರಡಿಸಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ಈ ತಂಡ ಪ್ರಕರಣದ ಸಂಪೂರ್ಣ ತನಿಖೆ ನಡೆಸಲಿದೆ.

ಹೊಸ ನೇಮಕಗೊಂಡವರಲ್ಲಿ ಮಂಗಳೂರು ಡಿಸಿಆರ್‌ಇ ಎಸ್ಪಿ ಸಿ.ಎ ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್‌ಪಿ, ಎ.ಸಿ ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ್, ಸಿಎಸ್‌ಪಿ ಇನ್ಸ್‌ಪೆಕ್ಟರ್‌ ಇ.ಸಿ ಸಂಪತ್, ಸಿಎಸ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್‌ ಕೆ.ಕುಸುಮಧರ್, ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್ಸ್‌ಪೆಕ್ಟರ್‌ ಪಿ.ಡಿ ಸವಿತ್ರು ತೇಜ್, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ಕೋಕಿಲ ನಾಯಕ್, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ವೈಲೆಟ್ ಫೆಮಿನಾ, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ಶಿವ ಶಂಕರ್, ಉತ್ತರ ಕನ್ನಡ, ಶಿರಸಿ ಎನ್.ಎಂ. ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ ರಾಜ್‌ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಆಂಕೋಲ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಆರ್.ಸುಹಾಸ್, ಉತ್ತರ ಕನ್ನಡ ಮುಂಡಗೋಡು ಸಬ್‌ಇನ್ಸ್‌ಪೆಕ್ಟರ್‌ ವಿನೋದ್ ಎಸ್. ಕಾಳಪ್ಪನವರ್, ಮಂಗಳೂರು ಮೆಸ್ಕಾಂ ಸಬ್‌ಇನ್ಸ್‌ಪೆಕ್ಟರ್‌ ಜೆ.ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಭಾಷ್ ಕಾಮತ್, ಉಡುಪಿ ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಹರೀಶ್‌ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್‌ಕಾನ್‌ಸ್ಟೇಬಲ್ ಪ್ರಕಾಶ್, ಉಡುಪಿ ಕುಂದಾಪುರನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್‌ಎಂಎಸ್ ಹೆಡ್‌ಕಾನ್‌ಸ್ಟೇಬಲ್ ದೇವರಾಜ್ ಅವರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.

ಇವರು ಧರ್ಮಸ್ಥಳ ಪೊಲೀಸರು ದಾಖಲಿಸಿಕೊಂಡಿರುವ ಅನಾಮಿಕ ದೂರು ಆಧಾರದ ಮೇಲೆ ತನಿಖೆ ಆರಂಭಿಸಲಿದ್ದಾರೆ.

ಎಸ್ಐಟಿ ಮೊದಲಿಗೆ ಧರ್ಮಸ್ಥಳ ಠಾಣೆಗೆ ಭೇಟಿ ನೀಡಿ, ಸ್ಥಳೀಯ ಎಸ್ಪಿ ಹಾಗೂ ಪೊಲೀಸರು ಸಂಗ್ರಹಿಸಿದ ಮಾಹಿತಿಯನ್ನು ಪಡೆದುಕೊಳ್ಳಲಿದೆ. ನಂತರ ಎಫ್ಐಆರ್ ನಕಲು ಹಾಗೂ 164 ಅಡಿ ಅಧೀನದ ಹೇಳಿಕೆಗಳನ್ನು ಪರಿಶೀಲಿಸಲಾಗುತ್ತದೆ. ಆರೋಪಿಗಳು ಅಥವಾ ಮಾಹಿತಿ ನೀಡಿದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಈ ನಡುವೆ, ಸಿಕ್ಕಿರುವ ಅಸ್ಥಿಪಂಜರದ ಡಿಎನ್ಎ ಪರೀಕ್ಷೆ ನಡೆಯುತ್ತಿದೆ. ಫಲಿತಾಂಶದ ಆಧಾರದಲ್ಲಿ ಇತರ ಶವಗಳ ಹುಡುಕಾಟ ಮುಂದುವರೆಯಲಿದೆ. ತನಿಖೆ ಪೂರ್ತಿಯಾದ ಬಳಿಕ, ಎಸ್ಐಟಿ ದೋಷಾರೋಪ ಪಟ್ಟಿಯನ್ನು ಕೋರ್ಟಿಗೆ ಸಲ್ಲಿಸುವ ನಿರೀಕ್ಷೆಯಿದೆ. ಧರ್ಮಸ್ಥಳ ಪ್ರಕರಣ ಇದೀಗ ರಾಜ್ಯದ ಗಮನ ಸೆಳೆದಿರುವ ಗಂಭೀರ ತನಿಖಾ ವಿಷಯವಾಗಿದ್ದು, ಇದರಲ್ಲಿ ಯಾವುದೇ ರೀತಿಯ ವಿಳಂಬವಿಲ್ಲದಂತೆ, ನಿಯೋಜಿಸಲಾದ ಅಧಿಕಾರಿಗಳು ಕಾರ್ಯತತ್ಪರರಾಗಿದ್ದಾರೆ.

RELATED ARTICLES
- Advertisment -
Google search engine

Most Popular