Wednesday, July 15, 2026
Google search engine

Homeಅಪರಾಧಧರ್ಮಸ್ಥಳ ‘ಬುರುಡೆ ಷಡ್ಯಂತ್ರ’ ಪ್ರಕರಣ : 7,005 ಪುಟಗಳ ಅಂತಿಮ ವರದಿ ಸಲ್ಲಿಸಿದ ಎಸ್‌ಐಟಿ

ಧರ್ಮಸ್ಥಳ ‘ಬುರುಡೆ ಷಡ್ಯಂತ್ರ’ ಪ್ರಕರಣ : 7,005 ಪುಟಗಳ ಅಂತಿಮ ವರದಿ ಸಲ್ಲಿಸಿದ ಎಸ್‌ಐಟಿ

ಬೆಳ್ತಂಗಡಿ : ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ಧರ್ಮಸ್ಥಳ ಪೊಲೀಸ್ ಠಾಣೆಯ ‘ಬುರುಡೆ ಷಡ್ಯಂತ್ರ’ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ), ಬೆಳ್ತಂಗಡಿ ನ್ಯಾಯಾಲಯಕ್ಕೆ 7,005 ಪುಟಗಳ ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದೆ.

ಎಸ್‌ಐಟಿ ಅಧಿಕಾರಿಗಳ ತಂಡವು ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಅವರ ನ್ಯಾಯಾಲಯಕ್ಕೆ ಮಧ್ಯಾಹ್ನ ಹಾಜರಾಗಿ, ಒಟ್ಟು 12 ಕಡತಗಳಲ್ಲಿ ಸಿದ್ಧಪಡಿಸಿರುವ ಸಮಗ್ರ ವರದಿಯನ್ನು ಸಲ್ಲಿಸಿದ್ದು, ಈ ವರದಿಯಲ್ಲಿ ಈ ಹಿಂದೆ ಸಲ್ಲಿಕೆಯಾಗಿದ್ದ 3,923 ಪುಟಗಳು ಹಾಗೂ ಹೊಸದಾಗಿ ಸಿದ್ಧಪಡಿಸಲಾದ 3,082 ಪುಟಗಳ ದಾಖಲೆಗಳನ್ನು ಸೇರಿಸಲಾಗಿದ್ದು, ಒಟ್ಟು 7,005 ಪುಟಗಳ ಅಂತಿಮ ವರದಿಯಾಗಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 215ರ ಅಡಿಯಲ್ಲಿ ಸುಳ್ಳು ಸಾಕ್ಷ್ಯ (Perjury) ನೀಡಿದ ಆರೋಪದ ಮೇಲೆ ಪ್ರಮುಖ ಆರೋಪಿ ಹಾಗೂ ಮಾಜಿ ‘ಮಾಸ್ಕ್ ಮ್ಯಾನ್’ ಸಿ.ಎನ್.ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ., ವಿಠಲ್ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಒಟ್ಟು ಆರು ಮಂದಿಯ ವಿರುದ್ಧ ಆರೋಪ ಮಾಡಲಾಗಿದೆ.

ವರದಿ ಸಲ್ಲಿಸುವ ವೇಳೆ ಎಸ್‌ಐಟಿ ಎಸ್‌ಪಿ ಸಿ.ಎ.ಸೈಮನ್, ಇನ್ಸ್‌ಪೆಕ್ಟರ್‌ಗಳಾದ ಕುಸುಮಾಧರ್, ಮಂಜುನಾಥ್ ಹಾಗೂ ಇತರ ಅಧಿಕಾರಿಗಳು ನ್ಯಾಯಾಲಯದಲ್ಲಿ ಹಾಜರಿದ್ದರು. ಪ್ರಕರಣದ ಪ್ರಮುಖ ಆರೋಪಿ ಸಿ.ಎನ್.ಚಿನ್ನಯ್ಯ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವರದಿ ಸಲ್ಲಿಕೆಯೊಂದಿಗೆ ಎಸ್‌ಐಟಿ ತನಿಖೆ ಪೂರ್ಣಗೊಂಡಿದ್ದು, ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ನ್ಯಾಯಾಲಯದಲ್ಲಿ ಮುಂದುವರಿಯಲಿದೆ.


RELATED ARTICLES
- Advertisment -
Google search engine

Most Popular