ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಷಡ್ಯಂತ್ರ ನಡೆಯುತ್ತಿರುವುದನ್ನು ಖಂಡಿಸಿ ಬಿಜೆಪಿಯ ಮತ್ತೊಂದು ತಂಡ ಇಂದು ಧರ್ಮಸ್ಥಳ ಚಲೋ ಅಭಿಯಾನ ಹಮ್ಮಿಕೊಂಡಿದೆ.
ಇಂದು ಬೆಂಗಳೂರಿನ ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಘಟಕ ಕೊಡಿಗೆಹಳ್ಳಿ ಗೇಟ್ನ ಗುಂಡಾಂಜನೇಯ ದೇವಸ್ಥಾನದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸುಮಾರು 500ಕ್ಕೂ ಹೆಚ್ಚು ವಾಹನಗಳಿಂದ ಯಾತ್ರೆ ಆರಂಭ ಮಾಡಲಾಗಿದೆ.
ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಬಿಜೆಪಿ ಜಿಲ್ಲಾಧ್ಯಕ್ಷ ಎಸ್ ಹರೀಶ್ ನೇತೃತ್ವದಲ್ಲಿ ಈ ಅಭಿಯಾನ ನಡೆಯುತ್ತಿದೆ.ಗುಂಡಾಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಕೆ ಮಾಡಿ ಯಾತ್ರೆ ಆರಂಭ ಮಾಡಲಾಗಿದೆ.