Thursday, September 4, 2025
Google search engine

Homeರಾಜ್ಯಧರ್ಮಸ್ಥಳ ಸೌಜನ್ಯ ಹತ್ಯೆ ಪ್ರಕರಣ: ಬಿಜೆಪಿ ಹಂತಕರ ಬಗ್ಗೆ ಸತ್ಯ ಬಿಚ್ಚಿಡಲಿ :ಪ್ರಿಯಾಂಕ್ ಖರ್ಗೆ ಸವಾಲು

ಧರ್ಮಸ್ಥಳ ಸೌಜನ್ಯ ಹತ್ಯೆ ಪ್ರಕರಣ: ಬಿಜೆಪಿ ಹಂತಕರ ಬಗ್ಗೆ ಸತ್ಯ ಬಿಚ್ಚಿಡಲಿ :ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಹಂತಕರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ನಾಯಕರು ಸತ್ಯವನ್ನು ಬಹಿರಂಗಪಡಿಸಲಿ ಮತ್ತು ಆ ಮೂಲಕ ಸೌಜನ್ಯ ಅವರಿಗೆ ನ್ಯಾಯ ಒದಗಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು ಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರಿಗೆ ಸೌಜನ್ಯ ಹತ್ಯೆ ಮಾಡಿದವರು ಯಾರು ಎಂಬ ಮಾಹಿತಿ ಇದೆ ಎಂದು ಸ್ವತಃ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರು 2023ರಲ್ಲಿ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾಗಿದ್ದ ಕಾಲದಲ್ಲಿ ಹೇಳಿರುವುದು, ಹಾಗಾಗಿ ಈ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ.

ಸೌಜನ್ಯ ಹಂತಕರ ಬಗ್ಗೆ ಬಿಜೆಪಿಯವರಿಗೆ ಮಾಹಿತಿ ಇದ್ದರೂ ಅಂದಿನಿಂದ ಇಂದಿನವರೆಗೂ ಗೌಪ್ಯವಾಗಿ ಇಟ್ಟಿರುವುದೇಕೆ? ಈಗಲೂ SIT ಮುಂದೆ ಮಾಹಿತಿ ನೀಡಲು ಮುಕ್ತ ಅವಕಾಶವಿದೆ, ಸೌಜನ್ಯ ಹಂತಕರ ಬಗ್ಗೆ ಮಾಹಿತಿ ನೀಡುವ ಬಿಜೆಪಿ ನಾಯಕರಿಗೆ ರಕ್ಷಣೆ ಒದಗಿಸುವುದು ನಮ್ಮ ಸರ್ಕಾರದ ಜವಾಬ್ದಾರಿ.

ಬಿಜೆಪಿಯವರು ಸೌಜನ್ಯ ಹತ್ಯೆಗೆ ನ್ಯಾಯ ಒದಗಿಸುವ ತಮ್ಮ ವಾಗ್ದಾನವನ್ನು ನೆನಪು ಮಾಡಿಕೊಳ್ಳಲಿ, ಹಂತಕರ ಬಗ್ಗೆ ತಮಗಿರುವ ಮಾಹಿತಿ ಬಹಿರಂಗಪಡಿಸಿ ತಮ್ಮ ಬದ್ಧತೆಯನ್ನು ನಿರೂಪಿಸಲಿ ಎಂದು ಸವಾಲು ಹಾಕಿದ್ದಾರೆ.

RELATED ARTICLES
- Advertisment -
Google search engine

Most Popular