Thursday, July 16, 2026
Google search engine

Homeರಾಜಕೀಯಸಚಿವ ಸಂಪುಟ ವಿಸ್ತರಣೆ ಚರ್ಚೆ ಸಹಜ ; ಹೈಕಮಾಂಡ್‌ ನಾಯಕರನ್ನೂ ಭೇಟಿ ಮಾಡುತ್ತೇನೆ : ಲಕ್ಷ್ಮಣ್‌...

ಸಚಿವ ಸಂಪುಟ ವಿಸ್ತರಣೆ ಚರ್ಚೆ ಸಹಜ ; ಹೈಕಮಾಂಡ್‌ ನಾಯಕರನ್ನೂ ಭೇಟಿ ಮಾಡುತ್ತೇನೆ : ಲಕ್ಷ್ಮಣ್‌ ಸವದಿ

ನವದೆಹಲಿ : ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಯನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಯುವುದು ಸಹಜ. ಆದರೆ ಪಕ್ಷ ಸೇರ್ಪಡೆಯಾಗುವ ವೇಳೆ ನೀಡಲಾದ ಭರವಸೆಗಳ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದು ಹೇಳಿದರು.

ಬೆಳಗಾವಿ ರಾಜ್ಯದ ಅತಿ ದೊಡ್ಡ ಜಿಲ್ಲೆಯಾಗಿರುವುದರಿಂದ ಸಚಿವ ಸ್ಥಾನಕ್ಕೆ ಪೈಪೋಟಿ ಇರುವುದು ಸಹಜ. ಈ ಹಿಂದೆ ಒಂದೇ ಜಿಲ್ಲೆಗೆ ಎರಡಕ್ಕಿಂತ ಹೆಚ್ಚು ಸಚಿವ ಸ್ಥಾನ ನೀಡಿರುವ ಉದಾಹರಣೆಗಳಿವೆ ಎಂದು ಅವರು ಹೇಳಿದರು. ಈ ವಿಚಾರವಾಗಿ ಪಕ್ಷದ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸುವುದಾಗಿ ಲಕ್ಷ್ಮಣ್‌ ಸವದಿ ತಿಳಿಸಿದರು.

RELATED ARTICLES
- Advertisment -
Google search engine

Most Popular