ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ ಅವರ 61ನೇ ಹುಟ್ಟು ಹಬ್ಬದ ಅಂಗವಾಗಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಆಚರಸಿದರು.
ಬಳಿಕ ತಾಲೂಕು ಕಾಂಗ್ರೆಸ್ ವಕ್ತಾರ ಸಯ್ಯದ್ದ್ ಜಾಬೀರ್ ಮಾತನಾಡಿ ವಿಧಾನ ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ ಅವರು ತಮ್ಮ ತಂದೆಯ ಬದುಕಿನ ಮೌಲ್ಯಗಳನ್ನು ಅಳವಡಿಸಿಕೊಂಡು ಸಾಗಿದರು. ತಂದೆಯ ಹಾದಿಯಲ್ಲೇ ಅವರ ಪುತ್ರ ಮಧು ಮಾದೇಗೌಡರು ತಂದೆಯ ದಾರಿಯಲ್ಲೇ ನಡೆಯುತ್ತಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಮಧು.ಜಿ.ಮಾದೇಗೌಡ ಅವರು ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳ ಪದವೀಧರ ಮತದಾರರಿಂದ ಆಯ್ಕೆಯಾಗುವ ಮೂಲಕ ನಾಲ್ಕು ಜಿಲ್ಲೆಗಳ ಪದವೀಧರರ ಸಮಸ್ಯೆಗಳಿಗೆ ಸದನದಲ್ಲಿ ಸ್ಪಂಧಿಸುವ ಮೂಲಕ ಕ್ಷೇತ್ರದ ಗೌರವವನ್ನು ಹೆಚ್ಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಲೋಕಸಭಾ ಸದಸ್ಯರಾಗಿ ಕೆಲಸ ಮಾಡುವ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ ನೀಡಲಿ ಎಂದು ಶುಭ ಹಾರೈಸಿದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ತಾ.ಕುರುಬರ ಸಂಘದ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ, ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕಿ ಸರಿತಾ ಜವರಪ್ಪ, ಕಾಂಗ್ರೆಸ್ ಮುಖಂಡರಾದ ಎಂ.ಎಸ್.ಆನಂತ್, ಸುಧಾಕರ್, ಬಿ.ಹೆಚ್.ಕುಮಾರ್, ನಿಶಾಂತ್, ಸಯ್ಯದ್ದ್ ಶಾಕೀರ್, ಮಧು.ಜಿ.ಮಾದೇಗೌಡ ಆಪ್ತ ಸಹಾಯಕ ಕೃಷ್ಣ, ಮೊದಲಾದವರು ಇದ್ದರು.



