ನಂಜನಗೂಡು: ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಂಜನಗೂಡು ಮತ್ತು ಬಿಳಿಗೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ವೃತ್ತದ ಮೇಲ್ವಿಚಾರಕಿಯರಿಗೆ ಕೇಂದ್ರ ಸರ್ಕಾರದ ಯೋಜನೆಯಾದ ರಾಷ್ಟ್ರೀಯ ಪೋಷಣ್ ಅಭಿಯಾನ (ಮಿಷನ್ ೨.೦) ಯೋಜನೆಯಡಿ ಸ್ಯಾಮ್‌ಸಾಂಗ್ ಸ್ಮಾರ್ಟ್ ಫೋನ್‌ಗಳನ್ನು ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಶಾಸಕ ದರ್ಶನ್ ಧೃವನಾರಾಯಣ ವಿತರಿಸಿದರು.
ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ ಫೋನ್ ಮೂಲಕ ಅಂಗನವಾಡಿ ಕಾರ್ಯಕರ್ತೆಯರು ಪೋಷಣ್ ಟ್ರ್ಯಾಕರ್ ಆಪ್ ಮೂಲಕ ಪ್ರತಿ ದಿನ ಅಂಗನವಾಡಿ ಕೇಂದ್ರದ ದೈನಂದಿನ ಚಟುವಟಿಕೆಗಳಾದ ಮಕ್ಕಳ ಹಾಜರಾತಿ, ಶಾಲಾ ಪೂರ್ವ ಶಿಕ್ಷಣ, ಹಾಗೂ ಬಿಸಿ ಊಟ ವಿತರಣೆ ಮುಂತಾದವುಗಳನ್ನು ಪೋಷಣ್ ಟ್ರ್ಯಾಕರ್‌ನಲ್ಲಿ ತಪ್ಪದೇ ಅಳವಡಿಸಲು ಬೇಕು. ಹಾಗೂ ಸರ್ಕಾರದಿಂದ ನೀಡಿರುವ ಸ್ಮಾರ್ಟ್ ಫೋನ್‌ಗಳನ್ನು ಸದ್ಬಳಕೆ ಮಾಡಿಕೊಂಡು ಇಲಾಖಾ ಮಾಹಿತಿಯನ್ನು ನಿರ್ವಹಣೆ ಮಾಡಲು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್ .ಸಿ ಬಸವರಾಜು, ಮಾಜಿ ವಾಲ್ಮೀಕಿ ನಿಗಮದ ಅಧ್ಯಕ್ಷರು, ವಿಜಯ್ ರವರು, ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಧಿಕಾರಿಗಳು, ಹೆಚ್ ಆರ್ ಸುರೇಶ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ನಿರೂಪಣಾಧಿಕಾರಿ ಮಂಜುನಾಥ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ, ಭವ್ಯಶ್ರೀ ಕೆ ಎಸ್, ಮಂಜುಳಾ ಬಿ, ಮತ್ತು ತಿಬ್ಬಯ್ಯ, ಮತ್ತು ಸಿಬ್ಬಂದಿವರ್ಗದವರು ಹಾಗೂ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಪೋಷಣೆ ಅಭಿಯಾನ ಯೋಜನೆಯ ಸಿಬ್ಬಂದಿಗಳು ಹಾಜರಿದ್ದರು.