Monday, June 2, 2025
Google search engine

Homeರಾಜ್ಯಸುದ್ದಿಜಾಲಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮೀನುಗಾರರ ಮನೆಗೆ ಭೇಟಿ ಮತ್ತು ಪರಿಹಾರ ಭರವಸೆ

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮೀನುಗಾರರ ಮನೆಗೆ ಭೇಟಿ ಮತ್ತು ಪರಿಹಾರ ಭರವಸೆ

ಮಂಗಳೂರು (ದಕ್ಷಿಣ ಕನ್ನಡ): ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಭೇಟಿ ನೀಡಿ, ಕುಟುಂಬದವರಿಗೆ ಸಮಾಧಾನ ಹೇಳಿದರು. ನಾಪತ್ತೆಯಾಗಿರುವ ಮೀನುಗಾರರ ಕುಟುಂಬಕ್ಕೆ ‘ಮೀನುಗಾರರ ಸಂಕಷ್ಟ ಪರಿಹಾರ ನಿಧಿ’ಯಿಂದ ತಲಾ 8 ಲಕ್ಷ ರೂಪಾಯಿ ಪರಿಹಾರ ನೀಡುವ ಭರವಸೆಯನ್ನು ಸಚಿವರು ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊಳತ್ತಮಜಲು ಘಟನೆಯ ಗಾಯಾಳು ಕಲಂದರ್ ಶಾಫಿ ಅವರನ್ನು ಭೇಟಿಯಾದರು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಮಾಜಿ ವಿಧಾನಪರಿಷತ್ ಸದಸ್ಯ ಕೆ.ಎಸ್. ಮುಹಮ್ಮದ್ ಮಸೂದ್ ಅವರ ಮನೆಗೆ ಭೇಟಿ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ನಗರದ ಶ್ರೀ ರಾಮಕೃಷ್ಣ ಮಠಕ್ಕೆ ಭೇಟಿ ನೀಡಿದರು. ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದ ಜೀ ಅವರಿಂದ ಆಶೀರ್ವಾದ ಪಡೆದು, ಸಮಾಲೋಚನೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕೊಳತ್ತಮಜಲಿನಲ್ಲಿ ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

RELATED ARTICLES
- Advertisment -
Google search engine

Most Popular